ಬೆಂಗಳೂರು, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಾನಾ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದರು.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎಚ್ ಕ್ಯೂಟಿಸಿ ಹೆಲಿಪ್ಯಾಡಗೆ ಆಗಮಿಸಿದರು.
ಹೆಲಿಪ್ಯಾಡನಲ್ಲಿ ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕರು ಪ್ರಧಾನಮಂತ್ರಿಗಳನ್ನು ಸ್ವಾಗತಿಸಿದರು.
ಹೆಲಿಪ್ಯಾಡನಿಂದ ರಸ್ತೆ ಮಾರ್ಗವಾಗಿ ಪ್ರಧಾನಿ ಕೆಎಸ್ಆರ್ ರೈಲು ನಿಲ್ದಾಣಕ್ಕೆ ತೆರಳಿದರು. ಪ್ರಧಾನಮಂತ್ರಿ ಸಾಗುವ ಮಾರ್ಗದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ರಸ್ತೆ ಬದಿ ನಿಂತು ಪ್ರಧಾನಿ ಮೋದಿ ಅವರಿಗೆ ಸ್ವಾಗತ ಕೋರಿದರು.
ಪ್ರಧಾನಮಂತ್ರಿ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ವ್ಯಾಪಕ ಪೋಲಿಸ್ ಬಂದೋಬಸ್ತ ಏರ್ಪಡಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa