ಬಳ್ಳಾರಿ, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮಾದಿಗ ಜನಾಂಗಕ್ಕೆ ಒಳ ಮೀಸಲಾತಿ ನೀಡಲು ಆಗಸ್ಟ್ 16ರ ವಿಶೇಷ ಸಚಿವ ಸಂಪಟದ ಸಭೆಯಲ್ಲಿ ಸರ್ಕಾರ ಸ್ಪಷ್ಟವಾದ ನಿರ್ಧಾರವನ್ನು ಕೈಗೊಳ್ಳದಿದ್ದಲ್ಲಿ ಅಂದೇ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಹಾಕಲಾಗುತ್ತದೆ ಎಂದು ಒಳ ಮೀಸಲಾತಿ ಹೋರಾಟದ ಮುಖಂಡ ಎಚ್. ಹನುಮಂತಪ್ಪ ಅವರು ತಿಳಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದ ಅವರು, ಕರ್ನಾಟಕದಲ್ಲಿ ಇರುವ ಮಾದಿಗರ ಹಿತಕ್ಕಾಗಿ ಒಳ ಮೀಸಲಾತಿ ಜಾರಿಗೆ ತರುವುದಾಗಿ ಸಿದ್ದರಾಮಯ್ಯ ಅವರು ಚುನಾವಣೆಗಳಲ್ಲಿ ಬಹಿರಂಗವಾಗಿ ಘೋಷಿಸಿದ್ದಾರೆ. ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ನಂತರ, ಈ ವರದಿಯನ್ನು ಜಾರಿ ಮಾಡುವಲ್ಲಿ ಮೀನಮೇಷ ಎಣಿಸುತ್ತಿದ್ದಾರೆ.
ನಾಗಮೋಹನದಾಸ್ ವರದಿ ಜಾರಿಗೆ ಕಾಂಗ್ರೆಸ್ ಪಕ್ಷದಲ್ಲಿರುವ ಪರಿಶಿಷ್ಟ ಜನಾಂಗದ ಮುಖಂಡರೇ ಅಡ್ಡಗಾಲು ಹಾಕುತ್ತಿರುವುದು ದೊಡ್ಡ ವಿಪರ್ಯಾಸ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ವೋಚ್ಚ ನ್ಯಾಯಾಲಯ ಒಳ ಮೀಸಲಾತಿಯನ್ನು ಜಾರಿಗೊಳಿಸಲು ನೀಡಿರುವ ಆದೇಶವನ್ನು ಜಾರಿ ಮಾಡಲು ಒಂದು ವರ್ಷ ಕಳೆದಿದೆ. ಸರ್ಕಾರದ ನಿರ್ಲಕ್ಷ್ಯ ಮತ್ತು ಕಾಂಗ್ರೆಸ್‍ನ ಮಾದಿಗ ವಿರೋಧಿ ನೀತಿಯನ್ನು ಖಂಡಿಸಿ ಆಗಸ್ಟ್ 18ರಂದು ಫ್ರೀಡಂ ಪಾರ್ಟ್‍ನಲ್ಲಿ ಭಾರಿ ಪ್ರತಿಭಟನೆಯನ್ನು ನಡೆಸಿ, ಮುಖ್ಯಮಂತ್ರಿಗಳ ನಿವಾಸವನ್ನು ಮುತ್ತಿಗೆ ಹಾಕಲಾಗುವುದು ಎಂದರು.
ಈ ಸಂದರ್ಭದಲ್ಲಿ ಎ.ಕೆ. ಹುಲುಗಪ್ಪ, ಬೆಳಗುರ್ಕಿ ಸೋಮಶೇಖರ್, ವಸಂತ್ ಸೇರಿ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್