ಬಳ್ಳಾರಿ, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಸುರೇಶ್ ನಾಯ್ಕ್ ಆರ್. ಅವರು `ಎ ಸ್ಟಡಿ ಆನ್ ಸೋಶಿಯಲ್ ವರ್ಕ್ ಎಜ್ಯುಕೇಷನ್ ಇನ್ ಕಲ್ಯಾಣ ಕರ್ನಾಟಕ : ಇಶ್ಯೂಸ್ ಅಂಡ್ ಚಾಲೇಂಜ್' ವಿಷಯದ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿದೆ.
ಸುರೇಶ್ ನಾಯ್ಕ ಆರ್ ಅವರು ಸಮಾಜ ಕಾರ್ಯ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಗೌರಿ ಮಾಣಿಕ ಮಾನಸ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಸಿದ್ದಪಡಿಸಿ, ಸಲ್ಲಿಸಿದ್ದರು. ಪ್ರಸ್ತುತ ಇವರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್