ವಿಜಯಪುರ, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ನಗರದ ಎನ್.ಎಚ್-367 ರಿಂದ ಎಸ್‍ಟಿಪಿ ಮತ್ತು ಎಸ್‍ಡಬ್ಲೂಎಂ ಓಲ್ಡ ಎಪಿಎಂಸಿ ಮೂಲಕ ಶೀಗಿಕೇರಿ ಆರ್‍ಓಬಿ ವರೆಗಿನ ಮುಖ್ಯ ರಸ್ತೆ ಹಾಗೂ ಆಂತರಿಕ ರಸ್ತೆಗಳ ನಿರ್ಮಾಣ ಸೇರಿ ಒಟ್ಟು 4.25 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ಬಾಗಲಕೋಟೆ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಚಾಲನೆ ನೀಡಿದರು.
ರವಿವಾರ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಹಳೆ ಎಪಿಎಂಸಿ ಬಳಿ ಹಮ್ಮಿಕೊಂಡ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ನಂತರ ಮಾತನಾಡಿದ ಅವರು ಒಟ್ಟು 1.38 ಕಿ.ಮೀ ಉದ್ದದ ಡಾಂಬರ ರಸ್ತೆ ನಿರ್ಮಾಣವಾಗಿದ್ದು, ಇದಕ್ಕೆ ಹೊಂದಿಕೊಂಡು ಬರುವ ಸಣ್ಣ ಪುಟ್ಟ ರಸ್ತೆಗಳು ಇದ್ದು, ಪ್ರತಿಯೊಂದು ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ, ಉಪಾದ್ಯಕ್ಷೆ ಶೋಭಾ ರಾವ್, ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಕಾರ್ಯನಿರ್ವಾಹಕ ಅಭಿಯಂತರ ಒಟವಟಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀಕಾಂತ ಹಿರೇಗೌಡರ, ಶಾಖಾಧಿಕಾರಿ ಎಸ್.ಡಿ.ಸಣ್ಣಕ್ಕಿ ಸೇರಿದಂತೆ ಮುಖಂಡರಾದ ನಾಗರಾಜ ಹದ್ಲಿ, ಶ್ರೀನಿವಾಸ ಬಳ್ಳಾರಿ, ರಾಜು ಮನ್ನಿಕೇರಿ ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande