ದಾವಣಗೆರೆ, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಂಗಳೂರು–ದಾವಣಗೆರೆ–ಬೆಳಗಾವಿ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಭಾನುವಾರ ಹಸಿರು ನಿಶಾನೆ ದೊರಕಿತು. ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ರೈಲನ್ನು ಸ್ವಾಗತಿಸಿ ಬೆಳಗಾವಿಗೆ ಹೊರಡಲು ಹಸಿರು ನಿಶಾನೆ ತೋರಿದರು.
ಈ ವೇಳೆ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಈ ವೇಗದ ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಹಾಗೂ ವ್ಯಾಪಾರ ವಹಿವಾಟಿಗೆ ದೊಡ್ಡ ಮಟ್ಟದಲ್ಲಿ ಅನುಕೂಲವಾಗಲಿದೆ. ಪ್ರಯಾಣಿಕರಿಗೆ ವೇಗ, ಆರಾಮ ಹಾಗೂ ಸಮಯ ಉಳಿತಾಯ ಆಗಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa