ವಿಜಯಪುರ, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50ಲಕ್ಷಕ್ಕೆ ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 30 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.
ಅರ್ಜಿ ಸಲ್ಲಿಸಲು ದಿನಾಂಕ : 30-08-2025 ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂರವಾಣಿ 08352-295523 ಸಂಖ್ಯೆಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande