ಬಳ್ಳಾರಿ, 11 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತಂತೆ ಗುಗ್ಗರಹಟ್ಟಿ ಕೈಗಾರಿಕ ಪ್ರದೇಶದಲ್ಲಿ ಸೋಮವಾರ ದಾಳಿ ನಡೆಸಿದ್ದು, ಒಟ್ಟು 1,400 ಕೆ.ಜಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 50 ಸಾವಿರ ರೂ. ದಂಡ ವಿಧಿಸಲಾಗಿದೆ.
ಕಾರ್ಯಾಚರಣೆ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ), ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು ಹಾಗೂ ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್