ಆಗಷ್ಟ್ 13ಕ್ಕೆ ಬೃಹತ್ ಪ್ರತಿಭಟನೆ
ವಿಜಯಪುರ, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ಶ್ರೀ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ಮಾಡುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಶ್ರೀಧರ್ಮಸ್ಥಳ ಭಕ್ತಾಭಿಮಾನಿ ಅಶೋಕ ಅಲ್ಲಾಪುರ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 13ರಂದು ವಿಜಯಪು
ಧರ್ಮಸ್ಥಳ


ವಿಜಯಪುರ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶ್ರೀ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ಮಾಡುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಶ್ರೀಧರ್ಮಸ್ಥಳ ಭಕ್ತಾಭಿಮಾನಿ ಅಶೋಕ ಅಲ್ಲಾಪುರ ಹೇಳಿದರು.

ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 13ರಂದು ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದ ವರೆಗೂ ನೂರಾರು ಭಕ್ತರು ಭಾಗವಹಿಸಿ ಪ್ರತಿಭಟನೆ ಮಾಡುತ್ತೇವೆ ಎಂದರು.

ಶ್ರೀ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಸಲ್ಲದು. ಶ್ರೀ ಧರ್ಮಸ್ಥಳಕ್ಕೆ ನೂರಾರು ವರ್ಷಗಳ ಇತಿಹಾಸ ಇದೆ. ಇದನ್ನು ಹಾಳು ಮಾಡುವ ಉದ್ದೇಶ ಕೆಲವರೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಗಿರೀಶ್ ಮಟ್ಟಣ್ಣನವರ, ಮಹೇಶ ಶೆಟ್ಟಿ ತಿಮರೊಡಿ, ಸಮೀರ್ ಎಂ.ಡಿ ಸೇರಿದಂತೆ ಹಲವರ ಕೈವಾಡ ಇದೆ ಎಂದು ವಾಗ್ದಾಳಿ ನಡೆಸಿದರು. ಅದಕ್ಕಾಗಿ ಭಕ್ತರು ಸ್ವಯಂಚಾಲಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande