`ನಶಾಮುಕ್ತ ಭಾರತ’ ಅಭಿಯಾನ : 5ನೇ ವಾರ್ಷಿಕೋತ್ಸವ
ಬಳ್ಳಾರಿ, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ `ನಶಾಮುಕ್ತ ಭಾರತ’ ಅಭಿಯಾನದ 5ನೇ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 31 ರ ವರೆಗೆ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಕುರಿತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್
`ನಶಾಮುಕ್ತ ಭಾರತ’ ಅಭಿಯಾನ : 5ನೇ ವಾರ್ಷಿಕೋತ್ಸವ


ಬಳ್ಳಾರಿ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ `ನಶಾಮುಕ್ತ ಭಾರತ’ ಅಭಿಯಾನದ 5ನೇ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 31 ರ ವರೆಗೆ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಕುರಿತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ತಿಳಿಸಿದ್ದಾರೆ.

ಕಾಲೇಜು ಮತ್ತು ಅಂತರ್ ಕಾಲೇಜುಗಳಲ್ಲಿ ಸ್ಫರ್ಧೆ, ಸೆಮಿನಾರ್, ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದು. ಮಾದಕ ದ್ರವ್ಯ ವಿರೋಧಿ ಮಾನವ ಸರಪಳಿ ರಚನೆ, ವಿದ್ಯಾರ್ಥಿಗಳ ಮತ್ತು ಜನಸಮೂಹದ ಜಾಥಾ, ಬೀದಿ ನಾಟಕ, ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಾದ ಮ್ಯಾರಥಾನ್, ವಾಕಥಾನ್, ಮಾದಕ ದ್ರವ್ಯ ಸೇವೆನೆ ವಿರುದ್ದ ಓಟ, ಕ್ರೀಡಾ ಪಂದ್ಯಾವಳಿಗಳನ್ನು ಆಯೋಜಿಸಲಾಗುವುದು.

ಎಲ್ಲಾ ಶಾಲೆ ಮತ್ತು ಕಾಲೇಜು ಆವರಣದಲ್ಲಿ ಸಸಿ ನೆಡುವುದು, ಅವುಗಳನ್ನು ನಶಾ ಮುಕ್ತ ಭಾರತ ಅಭಿಯಾನಕ್ಕೆ ಅರ್ಪಿಸುವುದು. ಎಲ್ಲಾ ವಿದ್ಯಾರ್ಥಿಗಳು, ಯುವತಿಯರು, ಉದ್ಯೋಗಿಗಳು ಮತ್ತು ಇತರರು ಜಾಲತಾಣ, , https://nmba.dosje.govt.in/content/-a-pledge?type=e-pledge ಈ ಮೂಲಕ ಪ್ರತಿಜ್ಞಾವಿಧಿ ತೆಗೆದುಕೊಂಡು ಪ್ರಮಾಣ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಹಾಗೂ ಈ ಎಲ್ಲಾ ಕಾರ್ಯಕ್ರಮ ಮತ್ತು ಚಟುವಟಿಕೆಗಳನ್ನು ಎನ್‍ಎಂಬಿಎ ಮೊಬೈಲ್ ಆಪ್ ನಲ್ಲಿ ಕಡ್ಡಾಯವಾಗಿ ಅಪ್ ಲೋಡ್ ಮಾಡಬೇಕು. ಭಾವಚಿತ್ರಗಳನ್ನು ddwballari01@gmail.com ಇ-ಮೇಲ್‍ಗೆ ಕಳುಹಿಸಬೇಕು.

ನಶಾ ಮುಕ್ತ ಭಾರತ ಅಭಿಯಾನದ ಎಲ್ಲಾ ಕಾರ್ಯಕ್ರಮಗಳ ಜೊತೆಗೆ ಆಗಸ್ಟ್ 13 ರಂದು ಮಾದಕ ವಸ್ತು ಸೇವನೆ ಮಾಡದೇ ಇರುವುದಾಗಿ ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ, ಕಚೇರಿಗಳಲ್ಲಿ, ವಿಶ್ವವಿದ್ಯಾನಿಲಯಗಳು, ವಸತಿ ನಿಲಯಗಳಲ್ಲಿ, ಸಮುದಾಯದಲ್ಲಿ ಹಾಗೂ ಸಂಘಸಂಸ್ಥೆಗಳಲ್ಲಿ ಸಾಮೂಹಿಕ ಪತಿಜ್ಞೆಯನ್ನು ಕೈಗೊಳ್ಳುವುದರ ಮೂಲಕ ಕೇಂದ್ರ ಸರ್ಕಾರದ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

*ಪ್ರತಿಜ್ಞಾ ವಿಧಿ:*

“ಯುವಕರು ಪ್ರತಿ ರಾಷ್ಟ್ರದ ಶಕ್ತಿಯಾಗಿರುತ್ತಾರೆ ಮತ್ತು ಯುವ ಶಕ್ತಿಯು ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಕೊಡುಗೆಯನ್ನು ನೀಡುವಲ್ಲಿ ಪಾತ್ರವನ್ನು ವಹಿಸುತ್ತಿದೆ. ಆದ್ದರಿಂದ ಅತೀ ಹೆಚ್ಚು ಯುವಕರು ನಶಾಮುಕ್ತ ಭಾರತ ಅಭಿಯಾನದಲ್ಲಿ ಭಾಗವಹಿಸಿ ಕೊಡುಗೆ ನೀಡುವುದು ಬಹಳ ಮುಖ್ಯ, ದೇಶದ ಈ ಸವಾಲನ್ನು ಸ್ವೀಕರಿಸಿ, ಇಂದು ನಾವು ನಶಾ ಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ಒಂದಾಗುತ್ತಿದ್ದೇವೆ ಮತ್ತು ಸಮುದಾಯ, ಕುಟುಂಬ, ಸ್ನೇಹಿತರು ಮಾತ್ರವಲ್ಲದೆ ನಾವೂ ಮಾದಕ ವ್ಯಸನದಿಂದ ಮುಕ್ತರಾಗುತ್ತೇವೆ ಎಂಬ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇವೆ. ಬದಲಾವಣೆ ನಮ್ಮಿಂದಲೇ ಪ್ರಾರಂಭವಾಗಬೇಕಿರುತ್ತದೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ನಮ್ಮ ಬಳ್ಳಾರಿ ಜಿಲ್ಲೆಯನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸಲು ದೃಢ ನಿರ್ಧಾರ ತೆಗೆದುಕೊಳ್ಳುತ್ತೇವೆ. ನನ್ನ ದೇಶವನ್ನು ಮಾದಕ ವಸ್ತು ವ್ಯಸನದಿಂದ ಮುಕ್ತಗೊಳಿಸಲು ನನ್ನ ಕೈಲಾದಷ್ಟು ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ಮಾಡುತ್ತೇನೆ ಎಂದು ಪ್ರತಿಜ್ಞೆ ಸ್ವೀಕರಿಸುತ್ತೇನೆ.” ಎಂಬ ಪ್ರತಿಜ್ಞಾ ವಿಧಿಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರು ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande