ಗದಗ, 11 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ 110 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ 110 ನೇ ಜನ್ಮ ದಿನಾಚರಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಪ್ರಯಕ್ತ ಅವರ ಜೀವನ ಸಾಧನೆಗಳ ಕುರಿತು ವಿಧ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಪ್ರಬಂಧ, ಭಾಷಣ ಸ್ಪರ್ಧೆ ಆಯೋಜನೆಗೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಪಡಿಸಲು ತಿಳಿಸಿದ ಅವರು ಕಾರ್ಯಕ್ರಮದ ಕುರಿತು ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರುಗಳಿಗೆ ಸಾಕಷ್ಟು ಮುಂಚಿತವಾಗಿ ತಲುಪಿಸಬೇಕು. ಕಾರ್ಯಕ್ರಮದ ದಿನದಂದು ರಾಣಿ ಚನ್ನಮ್ಮ ವೃತ್ತದ ದಿಂದ ಕನಕ ಭವನದ ವರೆಗೆ ಭವ್ಯ ಮೆರವಣಿಗೆ ಆಯೋಜಿಸಲು ಸರ್ವ ಸಿದ್ಧತೆ ಮಾಡಿಕೊಳ್ಳಬೇಕು.
ಕಾರ್ಯಕ್ರಮದ ನಿರೂಪಕರು ಹಾಗೂ ಡಿ. ದೇವರಾಜ ಅರಸುರವರ ಜೀವನ ಗಾಥೆಯನ್ನು ಸವಿವರವಾಗಿ ತಿಳಿಸಬಲ್ಲ ನುರಿತ ಉಪನ್ಯಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಎಂ ಎಂ ತುಂಬರಮಟ್ಟಿ ಅವರು ಮಾತನಾಡಿ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವದು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿಗಳಾದ ಬಸವರಾಜ ಬಳ್ಳಾರಿ ಅವರು ಮಾತನಾಡಿ ಪ್ರತಿಯೊಂದು ಗದಗ್ ತಾಲೂಕಿನ ಮತ್ತು ಗದಗ ಜಿಲ್ಲೆಯಲ್ಲಿ ಇರುವಂತಹ ವಸತಿ ನಿಲಯಗಳಲ್ಲಿ ಡಿ ದೇವರಾಜ ಅರಸು ಅವರನ್ನು 110 ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ರಸಪ್ರಶ್ನೆ, ರಂಗೋಲಿ ಸ್ಪರ್ಧೆ, ಮತ್ತು ಇಂಡೋರ್ ಗೇಮ್ಸ್ ನಡೆಸಿಕೊಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್.ಎಸ್., ಸಮಾಜದ ಹಿರಿಯರಾದ ಪಕೀರಪ್ಪ ಹೆಬ್ಸೂರ್, ಆರ್ ಡಿ ಕಡ್ಲಿಕೊಪ್ಪ, ಎಸ್ ಮಲ್ಲಿಕಾರ್ಜುನ, ರುದ್ರಣ್ಣ ಗುಳಗುಳಿ, ಹರೀಶ್ ಪೂಜಾರ್, ಮೋಹನ್ ಚಂದಪ್ಪನವರ್, ಶಿವಪ್ಪ ಮಡಿವಾಳ, ಧಾಮಣ್ಣ ಮಡಿವಾಳರ ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP