ಬೆಂಗಳೂರು, 11 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa