ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿರುವ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಗೆ 2025-26ನೇ ಸಾಲಿನ ವೃತ್ತಿಪರ ಕುಶ
ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ


ಕೊಪ್ಪಳ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿರುವ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಗೆ 2025-26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವೃತ್ತಿಗಳಾದ ಧೋಬಿ, ಕ್ಷೌರಿಕ, ಬಡಗಿತನ, ಹೊಲಿಗೆ ವೃತ್ತಿಯ ಉಪಕರಣಗಳನ್ನು ಪಡೆಯಲು ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳು ಆನ್‍ಲೈನ್ ವೆಬ್‍ಸೈಟ್ Koppal.nic.in ನಲ್ಲಿ ನಮೂದಿಸಿದ ಲಿಂಕ್‍ನ ಮುಖಾಂತರ ಅರ್ಜಿಗಳನ್ನು ಆಗಸ್ಟ್ 12 ರಿಂದ ಸೆಪ್ಟೆಂಬರ್ 12ರ ವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ.

ಆಸಕ್ತ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಖಾಗ್ರಾ) ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಜಿಲ್ಲಾ ಪಂಚಾಯತ್), ಕೊಪ್ಪಳ ಕಛೇರಿ ದೂರವಾಣಿ ಸಂಖ್ಯೆ 08539-230980 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ (ಜಿ.ಪಂ) ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande