ಬೆಂಗಳೂರು, 11 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಆಗಸ್ಟ್ 22ರವರೆಗೆ ನಡೆಯುವ ಅಧಿವೇಶನದಲ್ಲಿ ಸರ್ಕಾರ–ಪ್ರತಿ ಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯುವ ನಿರೀಕ್ಷೆಯಿದೆ.
ಬಿಜೆಪಿ, ಜೆಡಿಎಸ್ ಪಕ್ಷಗಳು ಸರ್ಕಾರದ ವಿರುದ್ಧ ಹಲವು ವಿಷಯಗಳಲ್ಲಿ ಹೋರಾಟಕ್ಕೆ ಸಜ್ಜಾಗಿದ್ದು, ವಿಶೇಷವಾಗಿ ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆ, ಪೊಲೀಸ್ ಅಧಿಕಾರಿಗಳ ಅಮಾನತು ಪ್ರಕ್ರಿಯೆ, , ರೈತರಿಗೆ ಯೂರಿಯಾ ಕೊರತೆ, ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಗಳ ಕುರಿತು ಸರಕಾರದ ವಿರುದ್ದ ಪ್ರತಿಪಕ್ಷಗಳು ಮುಗಿಬಿಳುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa