ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ
ವಿಜಯಪುರ, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್
ಲೋಕಾಯುಕ್ತ


ವಿಜಯಪುರ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾಮಾಜಿಕ ಕಳಕಳಿಯೊಂದಿಗೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಪ್ರಥಮಾದ್ಯತೆ ನೀಡಬೇಕು, ನೈರ್ಮಲ್ಯೀಕರಣ ಮಹತ್ವ ತಿಳಿಸುವ ನಿಟ್ಟಿನಲ್ಲಿ ಜನರಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಡುವ ಮೂಲಕ ಬಳಕೆ ಕುರಿತು ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಸಂಬ0ಧಿಸಿದ ಅಧಿಕಾರಿಗಳು ಈ ಬಗ್ಗೆ ಅಭಿಯಾನ ಹಮ್ಮಿಕೊಳ್ಳಬೇಕು. ಆಗಾಗ ಸಭೆ ನಡೆಸಿ ಸಾರ್ವಜನಿಕರಿಗೆ ಅಗತ್ಯ ತಿಳುವಳಿಕೆ ನೀಡಬೇಕು ಎಂದು ಅವರು ತಿಳಿಸಿದರು.

ಚರಂಡಿಯ ನೀರು ಒಂದೆಡೆ ನಿಲ್ಲದೇ ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆಯೂ, ಸಮರ್ಥವಾಗಿ ಕಾರ್ಯ ನಿರ್ವಹಿಸಿ ಈ ವಿಷಯದಲ್ಲಿ ನಿರ್ಲಕ್ಷö ವಹಿಸಬಾರದು. ಸಾರ್ವಜನಿಕರ ಕಾಳಜಿಗೆ ಆದ್ಯತೆಯಾಗಿಸಿಕೊಂಡು ಕಾರ್ಯ ನಿರ್ವಹಿಸಿ, ಈ ಕುರಿತು ತಾಲೂಕ್ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತೀವ್ರ ನಿಗಾ ವಹಿಸುವಂತೆ ಅವರು ಸೂಚನೆ ನೀಡಿದರು.

ವಸತಿ ನಿಲಯಗಳಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ವಸತಿ ನಿಲಯಗಳ ಕಟ್ಟಡಗಳ ಕಿಟಕಿಗಳಿಗೆ ಜಾಳಿಗೆ ಅಳವಡಿಸಿ, ಸೊಳ್ಳೆಗಳು ಬರದಂತೆ ನೋಡಿಕೊಂಡು ಎಂದು ಅವರು ತಿಳಿಸಿದರು.

ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಸ್ವಚ್ಛತೆ, ಗುಣಮಟ್ಟ ಆಹಾರ ಹಾಗೂ ಅಗತ್ಯ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಿ, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಹೆಚ್ಚಿನ ನಿಗಾ ವಹಿಸಬೇಕು. ಈ ಕುರಿತಾಗಿ ಸಂಬ0ಧಿಸಿದ ಅಧಿಕಾರಿಗಳು ವಾರಕ್ಕೆ ನಾಲ್ಕು ಬಾರಿ ವಸತಿ ನಿಲಯಕ್ಕೆ ದಿಢೀರ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಅವರು ಸೂಚನೆ ನೀಡಿದರು.

ಪ್ರವಾಸೋದ್ಯಮ ಉತ್ತೇಜನ ನೀಡುವ ದೃಷ್ಟಿಯಲ್ಲಿ ನಗರ ಸ್ಚಚ್ಛತೆಗೆ ಆದ್ಯತೆ ನೀಡಬೇಕು. ಈ ಹಿಂದಿಗಿ0ತಲೂ ಈಗ ನಗರದ ಸ್ವಚ್ಚತೆ ಸುಧಾರಣೆಯಾಗಿದೆ. ಆದಾಗ್ಯೂ ಜನರು ಎಲ್ಲೆಂದರಲ್ಲಿ ಕಸ ಬೀಸಾಕದಂತೆ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಿ, ಹಾಗೂ ಈ ಬಗ್ಗೆ ವಾರ್ಡವಾರು ಸಭೆ ನಡೆಸಿ ಸಾರ್ವಜನಿಕರಿಗೆ ಸೂಕ್ತ ತಿಳುವಳಿಕೆ ನೀಡಿ, ಬ್ಲಾಕ್‌ಸ್ಫಾಟ್‌ಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮವಹಿಸುವಂತೆ ಸೂಚಿಸಿದ ಅವರು. ರಾಜ್ಯದಲ್ಲಿಯೇ ಸ್ವಚ್ಛತಾ ನಗರವನ್ನಾಗಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜಿಲ್ಲೆಯಲ್ಲಿರುವ ಕೆರೆ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಈಗಾಗಲೇ ಸೂಚಿಸಿದಂತೆ ಕ್ರಮವಹಿಸಲಾಗಿದೆ. ಕೆರೆಗಳು ನಿಸರ್ಗದತ್ತ ಕೊಡುಗೆಯಾಗಿದೆ. ಅವುಗಳಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಜೀವಜಲ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಸೂಚನೆ ನೀಡಿದ ಅವರು. ಅಭಿವೃದ್ಧಿ ಪುನಃಶ್ಚೇತನ ಕೈಗೊಂಡು, ನಮ್ಮ ಮುಂದಿನ ಪೀಳಿಗೆಗೆ ಜಲಸಂರಕ್ಷಣೆಯ ಬಹು ದೊಡ್ಡ ಕೊಡುಗೆ ನೀಡಬೇಕು. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಅಧಿಕಾರಿಗಳು ದಿಢೀರ ಬೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಅವರು ಸೂಚನೆ ನೀಡಿದರು.

ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಪ್ರಶಂಸೆ : ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ಬಿ.ಎಸ್.ಪಾಟೀಲ ಅವರು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಕಾರ್ಯವೈಖರಿ ಕುರಿತು ಪ್ರಶಂಸೆ ವ್ಯಕ್ತಪಡಿಸಿ, ಪ್ರತಿದಿನ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸುವುದೂ ಸೇರಿದಂತೆ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಮತ್ತಷ್ಟು ಆದ್ಯತೆ ನೀಡಬೇಕು. ಅಪೌಷ್ಟಿಕೆತಯಿಂದ ಬಳಲುತ್ತಿರುವ ಮಕ್ಕಳ ದೃಷ್ಡಿಯಿಂದ ಗುರಿ ನಿಗದಿಪಡಿಸಿಕೊಂಡು ಮಕ್ಕಳ ಆರೋಗ್ಯ ಕಾಳಜಿ ಹೊಂದಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ 108 ಅಂಬುಲೆನ್ಸಗಳ ಸೇವೆ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ದುರಸ್ತಿ ಕಾರ್ಯಗಳನ್ನು ನಿಮ್ಮ ಹಂತದಲ್ಲಿಯೇ ನಿರ್ವಹಿಸಿಕೊಂಡು ಜನರಿಗೆ ತೊಂದರೆಯಾಗದ0ತೆ ನಿಗಾವಹಿಸಬೇಕು ಎಂದು ಹೇಳಿದರು. ಆರೋಗ್ಯ ಕ್ಷೇತ್ರದಲ್ಲಿ ಜಿಲ್ಲೆಗೆ ಒದಗುವ ಮೂಲಭೂತ ಸೌಲಭ್ಯ ಹಾಗೂ ಸಿಬ್ಬಂದಿ ಕೊರತೆ ತಮಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು ಮಾತನಾಡಿ, ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ನಗರ ಸೌಂದರ್ಯಿಕರಣಕ್ಕಾಗಿ ಸ್ವಚ್ಚತೆ ಕಾಪಾಡಲು “ಕಸ ಕಂಡರೆ ಫೋಟೋ ಕಳಿಸಿ” ವಿಶೇಷ ಆಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲು ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ಕರೆದು, ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಕೆರೆಗಳ ಸಂರಕ್ಷಣೆಗಾಗಿ ಕ್ರಮವಹಿಸಲಾಗುತ್ತಿದೆ. ಜಿಲ್ಲೆಯಲ್ಲಿನ 267 ಕೆರೆಗಳ ಪೈಕಿ ಎಲ್ಲಾ ಕೆರೆಗಳ ಅಳತೆ ಹಾಗೂ ಒತ್ತುವರಿ ತೆರವು ಕಾರ್ಯ ಪೂರ್ಣಗೊಳಿಸಲಾಗಿದೆ. 11 ಕೆರೆಗಳ ವಿವಿಧ ಕಾರಣಗಳಿಂದ ಒತ್ತುವರಿ ತೆರವು ಬಾಕಿ ಇದ್ದು ಇರುವ ಅಡೆತಡೆ ನಿವಾರಿಸಿಕೊಂಡು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯ ತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಶನಿವಾರ ಸ್ವಚ್ಛತಾ ಅಭಿಯಾನ ಕೈಗೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಕ್ಷೇತ್ರ ವೀಕ್ಷಣೆ ಮಾಡುವ ಮೂಲಕ ಅಂಗನವಾಡಿ ಶಾಲಾ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಕುರಿತು ಸ್ಥಿತಿಗತಿಗಳನ್ನು ಅರಿತು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ ಎಂದು ಹೇಳಿದರು.

ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳನ್ನು ಆಲಿಸಿ ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ಲೋಕಾಯುಕ್ತರ ಕಾರ್ಯದರ್ಶಿಗಳಾದ ಕೆ.ಶ್ರೀನಾಥ, ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಸೇರಿದಂತೆ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande