ಆ. 15 ರಿಂದ ಕೊಪ್ಪಳದಲ್ಲಿ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ
ಕೊಪ್ಪಳ, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೊಪ್ಪಳ ತೋಟಗಾರಿಕಾ ಇಲಾಖೆ ವತಿಯಿಂದ ತೋಟಗಾರಿಕಾ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದ ಉತ್ಕøಷ್ಟ ಗುಣಮಟ್ಟದ ಸಸಿಗಳ ಮತ್ತು ಆಧಾಯ ಹೆಚ್ಚಿಸುವ ತೋಟಗಾರಿಕೆ ಸಿಸಿ ತಳಿಗಳ ಪರಿಚಯ ಹಾಗೂ ಮಾರಾಟದ ``ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ’’ ``ಸ್ವದೇಶಿ ವಿದೇಶಿ ಹ
ಆ. 15 ರಿಂದ ಕೊಪ್ಪಳದಲ್ಲಿ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ


ಕೊಪ್ಪಳ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ತೋಟಗಾರಿಕಾ ಇಲಾಖೆ ವತಿಯಿಂದ ತೋಟಗಾರಿಕಾ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದ ಉತ್ಕøಷ್ಟ ಗುಣಮಟ್ಟದ ಸಸಿಗಳ ಮತ್ತು ಆಧಾಯ ಹೆಚ್ಚಿಸುವ ತೋಟಗಾರಿಕೆ ಸಿಸಿ ತಳಿಗಳ ಪರಿಚಯ ಹಾಗೂ ಮಾರಾಟದ ``ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ’’ ``ಸ್ವದೇಶಿ ವಿದೇಶಿ ಹಣ್ಣಿನ ಸಸಿಗಳ ಪರಿಚಯ, ಪ್ರದರ್ಶನ ಮತ್ತು ಮಾರಾಟ ಮೇಳ-2025’’ ನ್ನು ಆಗಸ್ಟ್ 15ರಿಂದ ಆ. 20ರವರೆಗೆ ನಗರದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮವು ಆ. 15ರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್ ಮಲ್ಲರ್ಕಾಜುನ್, ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನಿಯಮಿತದ ಅಧ್ಯಕ್ಷರು ಹಾಗೂ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ್ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸೇನ್ ಸಾಬ್ ನಬಿಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ತೋಟಗಾರಿಕೆ ಹಾಗೂ ರೇಷಾ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ, ಬೆಂಗಳೂರು ಲಾಲ್ ಬಾಗ್ ತೋಟಗಾರಿಕೆ ನಿರ್ದೇಶಕರಾದ ಡಿ.ಎಸ್ ರಮೇಶ, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಬೆಂಗಳೂರು ಲಾಲ್ ಬಾಗ್ ಕ್ಷೇತ್ರ ಮತ್ತು ನರ್ಸರಿ ಅಪರ ನಿರ್ದೇಶಕ ಕೆ.ಎನ್.ಪರಶಿವಮೂರ್ತಿ, ರಾಜ್ಯ ತೋಟಗಾರಿಕೆ ಮಿಷನ್ ಏಜೆನ್ಸಿಯ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ನೋಡಲ್ ಅಧಿಕಾರಿಗಳಾದ ಕೆ.ಬಿ ದುಂಡಿ, ಬೆಂಗಳೂರು ಲಾಲ್ ಬಾಗ್ ತಾಳೆ ಬೆಳೆ ಯೋಜನೆಯ ಅಪರ ನಿರ್ದೇಶಕರಾದ ಡಾ. ಎಸ್.ನಂದಾ, ಕಲಬುರಗಿ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕ ಮಂಜುನಾಥ ನಾರಾಯಣಪುರ, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಶಾಂತಪ್ಪ ತಿರಕಣ್ಣನವರ್, ಕೊಪ್ಪಳ ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷರಾದ ಯಂಕಣ್ಣ ಯರಾಶಿ, ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಶೇಖರಗೌಡ ಮಾಲಿಪಾಟೀಲ್ ಹಾಗೂ ಕ.ರಾ.ರೈ.ಉ.ಸಂ.ಸ.ಸಂ.ನಿ ನಿರ್ದೇಶಕರು ಹಾಗೂ ಕೊಪ್ಪಳದ ಅಭಿನವಶ್ರೀ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಕೆ.ಶಿವರಾಮಪ್ಪ ಅವರು ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಕೊಪ್ಪಳದ ತೋಟಗಾರಿಕೆ ಉಪ ನಿರ್ದೇಶಕ ಕೃಷ್ಣ ಸಿ. ಉಕ್ಕುಂದ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಂಜುನಾಥ ದೊಡ್ಡಪತ್ತಾರ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿರುವರು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande