ನಾಳೆ ಹಾಸನದಲ್ಲಿ ಆಲೂಗಡ್ಡೆ ಬೆಳೆ ಕ್ಷೇತ್ರೋತ್ಸವ
ಹಾಸನ, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಸೋಮನಹಳ್ಳಿಕಾವಲ್ ಹಾಸನದಲ್ಲಿ ಆ.12. ರಂದು ಆಲೂಗಡ್ಡೆ ಬೆಳೆಯಲ್ಲಿ ಆಧುನಿಕ ಬೇಸಾಯ ಎಂಬ ವಿಷಯದ ಕುರಿತು ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಸದರಿ ಕಾರ್ಯಕ್ರಮಕ್ಕೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್
ನಾಳೆ ಹಾಸನದಲ್ಲಿ ಆಲೂಗಡ್ಡೆ ಬೆಳೆ ಕ್ಷೇತ್ರೋತ್ಸವ


ಹಾಸನ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಸೋಮನಹಳ್ಳಿಕಾವಲ್ ಹಾಸನದಲ್ಲಿ ಆ.12. ರಂದು ಆಲೂಗಡ್ಡೆ ಬೆಳೆಯಲ್ಲಿ ಆಧುನಿಕ ಬೇಸಾಯ ಎಂಬ ವಿಷಯದ ಕುರಿತು ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಸದರಿ ಕಾರ್ಯಕ್ರಮಕ್ಕೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬಾಗಲಕೋಟೆಯ ಕುಲಪತಿಗಳು, ಕೇಂದ್ರಿಯ ಆಲೂಗಡ್ಡೆ ಸಂಶೋಧನಾ ಕೇಂದ್ರದ ನಿರ್ದೇಶಕರು, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬಾಗಲಕೋಟೆಯ ವಿಸ್ತರಣಾ ನಿರ್ದೇಶಕರು ಹಾಗೂ ಸಂಶೋಧನಾ ನಿರ್ದೇಶಕರು, ಕೃಷಿ ಮಹಾವಿದ್ಯಾಲಯ, ಕಾರೆಕೆಯ ಡೀನ್ ರವರು, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, GKVK, ಬೆಂಗಳೂರಿನ, ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರು, ಹಾಸನ, ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಕಂದಲಿ, ಜಿಲ್ಲಾ ಅಪರ ವ್ಯವಸ್ಥಾಪಕರು, ನಬಾರ್ಡ್, ಹಾಸನ ಹಾಗೂ ಇನ್ನು ಹಲವು ಗಣ್ಯರು ಸಭೆಯಲ್ಲಿ ಪಾಲ್ಗೊಂಡು ರೈತರಿಗೆ ಮಾಹಿತಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಸೋಮನಹಳ್ಳಿಕಾವಲ್, ಹಾಸನ.

ಹಾಸನ ಜಿಲ್ಲೆಯಲ್ಲಿ ಆಲೂಗಡ್ಡೆ ಬೆಳೆಯ ಸಂರಕ್ಷಣೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಎಂಬ ವಿಷಯವಾಗಿ ಚರ್ಚಿಸಲು ಆಲೂಗಡ್ಡೆ ಬೆಳೆಗೆ ಸಂಬಂಧಿಸಿದ ವಿವಿಧ ಮಧ್ಯಸ್ಥಗಾರರುಗಳಾದ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಸೋಮನಹಳ್ಳಿಕಾವಲ್ ಹಾಗೂ ಕೃಷಿ ವಿಜ್ಞಾನ ಕೇಂದ್ರ ಕಂದಲಿಯ ವಿಜ್ಞಾನಿಗಳು, ಕೃಷಿ ಮಹಾವಿದ್ಯಾಲಯ, ಕಾರೆಕೆರೆಯ ಡೀನ್ ರವರು, ಜಂಟಿ ಕೃಷಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಅಧಿಕಾರಿಗಳು, CIP ಹಾಗೂ GIZ ಸಂಸ್ಥೆಯ ಅಧಿಕಾರಿಗಳು, ಆಲೂಗಡ್ಡೆ ವರ್ತಕರ ಸಂಘದ ಅಧ್ಯಕ್ಷರು, ನಿರ್ದೇಶಕರುಗಳು ಹಾಗೂ ವರ್ತಕರುಗಳು, ಪ್ರಗತಿಪರ ಆಲೂಗಡ್ಡೆ ರೈತರು ಹಾಗೂ ಇನ್ನಿತರೆ ಸಂಬಂಧಿಸಿದವರೊಡನೆ ಚರ್ಚಿಸಲು ಸಭೆಯನ್ನು ಕರೆಯಲಾಗಿದ್ದು, ಹೆಚ್ಚಿನ ಸಂಖ್ಯೆಯ ರೈತರು ಹಾಗೂ ಎಲ್ಲಾ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಲಹೆಗಳನ್ನು ನೀಡಲು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande