ನಾಳೆ ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡದ ಆಯ್ಕೆ ಪ್ರಕ್ರಿಯೆ
ಹೊಸಪೇಟೆ, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಮೂಲಕ ಪ್ರಚಾರ ಮಾಡಲು ಕಲಾ ತಂಡಗಳನ್ನು ಆಯ್ಕೆ ಪ್ರಕ್ರಿಯೆಯನ್ನು ಆ.12 ರಂದು, ಬೆಳಗ್ಗೆ 11 ಗಂಟೆಯಿಂದ ನಡೆಯಲಿದೆ ಎಂದು ಹಿರಿಯ ಸಹಾಯಕ ನಿರ್ದೇಶ
ನಾಳೆ ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡದ ಆಯ್ಕೆ ಪ್ರಕ್ರಿಯೆ


ಹೊಸಪೇಟೆ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಮೂಲಕ ಪ್ರಚಾರ ಮಾಡಲು ಕಲಾ ತಂಡಗಳನ್ನು ಆಯ್ಕೆ ಪ್ರಕ್ರಿಯೆಯನ್ನು ಆ.12 ರಂದು, ಬೆಳಗ್ಗೆ 11 ಗಂಟೆಯಿಂದ ನಡೆಯಲಿದೆ ಎಂದು ಹಿರಿಯ ಸಹಾಯಕ ನಿರ್ದೇಶಕ ಧನಂಜಯಪ್ಪ ಬಿ. ತಿಳಿಸಿದ್ದಾರೆ.

ಜಿಲ್ಲೆಯ ಅರ್ಹ ಕಲಾ ತಂಡಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಿರುವ ಕಲಾತಂಡಗಳು ಆ.12 ರಂದು, ವಿಜಯನಗರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವ ಅಗತ್ಯ ಮೂಲ ದಾಖಲಾತಿಗಳೊಂದಿಗೆ ಕಡ್ಡಾಯವಾಗಿ ಭಾಗವಹಿಸತಕ್ಕದ್ದು, ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರು ಇರಬೇಕು.

ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಮತ್ತು ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರನ್ನೊಳಗೊಂಡಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರು ಇರಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande