ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆಯಾಗದಂತೆ ಕ್ರಮ- ಟಿ.ಎಸ್.ರುದ್ರೇಶಪ್ಪ
ಕೊಪ್ಪಳ, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆಯಾಗದಂತೆ ನಿಘಾವಹಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್ ರಿಂದ 2025ರ ಆಗಸ್ಟ್ 10ರ ವರೆಗೆ ಯೂರಿಯಾ ರಸಗೊಬ್ಬರದ ಬೇಡಿಕ
ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆಯಾಗದಂತೆ ಕ್ರಮ- ಟಿ.ಎಸ್.ರುದ್ರೇಶಪ್ಪ


ಕೊಪ್ಪಳ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆಯಾಗದಂತೆ ನಿಘಾವಹಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್ ರಿಂದ 2025ರ ಆಗಸ್ಟ್ 10ರ ವರೆಗೆ ಯೂರಿಯಾ ರಸಗೊಬ್ಬರದ ಬೇಡಿಕೆ 41,511 ಮೆಟ್ರಿಕ್ ಟನ್ ಆಗಿದ್ದು, ಈ ವಿರುದ್ಧ 40,851 ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನು ಹೊಂದಲಾಗಿದೆ. ಇದರಲ್ಲಿ 38,097 ಮೆಟ್ರಿಕ್ ಟನ್ ರಸಗೊಬ್ಬರವನ್ನು ವಿತರಣೆ ಮಾಡಲಾಗಿದೆ. ಇನ್ನುಳಿದ 2,754 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ದಾಸ್ತಾನಾಗಿ ಲಭ್ಯವಿದೆ.

ರವಿವಾರ (ಆ.10ರಂದು) ಇಂಡಿಯನ್ ಪೊಟ್ಯಾಶ್ ಲಿಮಿಟೆಡ್ ಜಿಲ್ಲೆಗೆ 1,306 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಹಂಚಿಕೆಯಾಗಿದ್ದು, ಇದರಲ್ಲಿ ಸೊಸೈಟಿಗಳಿಗೆ 544.90 ಮೆಟ್ರಿಕ್ ಟನ್ ಹಾಗೂ ಡೀಲರ್ಸ್ ಗಳಿಗೆ 761 ಮೆಟ್ರಿಕ್ ಟನ್ ಪೂರೈಸಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕ ಮಟ್ಟದ ಟಾಸ್ಕ್ ಫೆÇೀರ್ಸ್ ಸಮಿತಿಯ ಸದಸ್ಯರಾದ ತಹಶೀಲ್ದಾರ್, ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕಾ ನಿರ್ದೇಶಕರ ಉಸ್ತುವಾರಿಯಲ್ಲಿ ರಸಗೊಬ್ಬರ ವಿತರಣೆ ಮಾಡಲಾಗುತ್ತಿದೆ.

ಯೂರಿಯಾ ರಸಗೊಬ್ಬರದ ಪೂರೈಕೆ ಹಂತ ಹಂತವಾಗಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ 5,000 ಮೆಟ್ರಿಕ್ ಟನ್ ಆರ್.ಸಿ.ಎಫ್., ಎಂ.ಎಫ್.ಎಲ್., ಐಪಿಎಲ್, ಜಿ.ಎಸ್.ಎಫ್.ಸಿ. ಕಂಪನಿಗಳಿಂದ ಇನ್ನೂ ಹೆಚ್ಚಿನ ಪೂರೈಕೆ ಮಾಡಲು ಕ್ರಮ ವಹಿಸಲಾಗಿದೆ. ರಸಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಅಥವಾ ಅನಧೀಕೃತವಾಗಿ ದಾಸ್ತಾನು ಮಾಡಿದರೆ ಕೃಷಿ ಇಲಾಖೆ, ಕಂದಾಯ ಇಲಾಖೆ ಹಾಗೂ ಪೆÇೀಲಿಸ್ ಇಲಾಖೆಗೆ ದೂರನ್ನು ಸಲ್ಲಿಸಬೇಕು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande