ಹಾಸನ, 11 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪದವಿ ಮತ್ತು ಡಿಪ್ಲೊಮಾ ಪರೀಕ್ಷೆ ಮುಗಿದ ತಕ್ಷಣ ವ್ಯಾಸಂಗ ಮುಂದುವರೆಸಿದರೆ ಅಥವಾ ಕೆಲಸಕ್ಕೆ ಸೇರದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಲು ಮಾಹಿತಿ ನೀಡಲು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಯುವ ನಿಧಿ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಯುವನಿಧಿ ನೋಂದಣಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾಲೇಜುಗಳ ಹಾಗೂ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರುಗಳು ಸಭೆ ನಡೆಸಿ ನೋಂದಣಿ ಕಾರ್ಯವನ್ನು ಪ್ರಾರಂಭಿಸಿ ಹಾಸನ ಜಿಲ್ಲೆಯಲ್ಲಿ ಹೆಚ್ಚು ನೋಂದಣಿ ಮಾಡಬೇಕೆಂದು ಹಾಗೂ ನೋಂದಣಿಗೆ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಉತೀರ್ಣರಾದ ಅಭ್ಯರ್ಥಿಗಳ ಪಟ್ಟಿ ಪಡೆದು, ನೋಂದಣಿ ಅಧಿಕಗೊಳಿಸಬೇಕೆಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa