ಪ್ರೋತ್ಸಾಹಧನಕ್ಕಾಗಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ರಾಯಚೂರು, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ 2024ರಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ
ಪ್ರೋತ್ಸಾಹಧನಕ್ಕಾಗಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ


ರಾಯಚೂರು, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ 2024ರಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಲಾಗಿದೆ.

ಪಿಯುಸಿ ಹಾಗೂ 3 ವರ್ಷದ ಡಿಪ್ಲೋಮಾಗೆ 20 ಸಾವಿರ, ಪದವಿಗೆ 25 ಸಾವಿರ, ಸ್ನಾತಕೋತ್ತರ ಕೋರ್ಸಗಳಿಗೆ 30 ಸಾವಿರ, ಪಿ.ಜಿ ತಾಂತ್ರಿಕ ಕೋರ್ಸಗಳಿಗೆ 35 ಸಾವಿರ ನೀಡಲಾಗುವುದು. ಈ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್ ವಿಳಾಸ: https://twd.karnataka.gov.in/TWPostprizemoney ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ನಂತರ ಅದರ ದೃಢೀಕೃತ ಪ್ರತಿಯನ್ನು ಎಲ್ಲಾ ದಾಖಲೆಗಳ ಸಮೇತ ಆಯಾ ಜಿಲ್ಲಾ ಅಥವಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗಳಿಗೆ 04 ದಿನದೊಳಗಾಗಿ ಸಲ್ಲಿಸಬೇಕು.

ಷರತ್ತುಗಳು: ವಿದ್ಯಾರ್ಥಿಗಳು ಅಂತಿಮ ವರ್ಷದ ಪಿ.ಯು.ಸಿ.ಯನ್ನು 2023-24ನೇ ಶೈಕ್ಷಣಿಕ ವರ್ಷದ 2024ರಲ್ಲಿ ವ್ಯಾಸಂಗ ಮಾಡಿರಬೇಕು. ಸಿ.ಬಿ.ಎಸ್.ಸಿ ಮತ್ತು ಐ.ಸಿ.ಎಸ್.ಇ. ವತಿಯಿಂದ ನಡೆಸಲಾಗುವ 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾದವರು ಸಹ ಅರ್ಹರಿರುತ್ತಾರೆ. ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸ್‍ಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪಬ್ಲಿಕ್ ಪರೀಕ್ಷೆ ಇದ್ದಲ್ಲಿ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಮತ್ತು ಅಂತಿಮವಾಗಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.ಈ ಕೋರ್ಸ್‍ಗಳಿಗೆ ಸೆಮಿಸ್ಟರ್ ಪದ್ಧತಿಯಿದ್ದಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಮತ್ತು ಅಂತಿಮವಾಗಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.

ಈ ಎರಡೂ ಕೋರ್ಸ್‍ಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸಮಿಸ್ಟರ್‍ಗಳಲ್ಲಿ ಕ್ಯಾರಿ ಒವರ್ ಪದ್ದತಿಯಡಿ ಪಾಸಾಗಿದ್ದರೆ ಅಂತಹವರು ಅರ್ಹರಿರುವುದಿಲ್ಲ. ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಕೋರ್ಸ್‍ಗಳಲ್ಲಿ ಹೊರರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೆ ಅಂತಹವರು ಅರ್ಹರಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ್ದರೆ ಅಂತಹವರು ಅರ್ಹರಿರುವುದಿಲ್ಲ. ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಯು.ಜಿ.ಸಿ.ಯಿಂದ ಮಾನ್ಯತೆ ಪಡೆದ ಡೀಮ್ಡ್ ವಿಶ್ವವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ದಿನಾಂಕ:03-10-2016ರ ಪ್ರಕಾರ ದೂರಶಿಕ್ಷಣ ಸಂಸ್ಥೆಗಳ ಮೂಲಕ ವ್ಯಾಸಂಗ ಮಾಡಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿಸಿರಬೇಕು. ವಿದ್ಯಾರ್ಥಿಗಳ ಹೆಸರು ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿರುವಂತೆ ಆಧಾರ್ ಕಾರ್ಡನಲ್ಲಿ ಹಾಗೂ ಬ್ಯಾಂಕ್‍ಪುಸ್ತಕದಲ್ಲಿ ಒಂದೇ ಇರುವಂತೆ ನೋಡಿಕೊಳ್ಳತಕ್ಕದ್ದು. ಸಿ.ಜಿ.ಪಿ ಕೋರ್ಸು ನೀಡುವ ಕೋರ್ಸಗಳ ವಿದ್ಯಾರ್ಥಿಗಳ ಫಲಿತಾಂಶವು ವಿಶ್ವವಿದ್ಯಾಲಯವು ನಿಗಧಿಪಡಿಸುವ ಪ್ರಥಮ ಶ್ರೇಣಿಯ ಆಧಾರ್ ಮೇಲೆ ಅಥವಾ ಮಾನದಂಡದ ಮೇಲೆ ಪೋತ್ಸಾಹಧನ ಮಂಜೂರಾತಿಗೆ ಪರಿಗಣಿಸಲಾಗುವುದು.

ವಿಶೇಷ ಸೂಚನೆ: ಜಿಲ್ಲಾ ಕಚೇರಿಯಿಂದ ಪ್ರೋತ್ಸಾಹಧನ ಮಂಜೂರು ಮಾಡುವಾಗ ದಾಖಲಾತಿಗಳ ಪರಿಶೀಲನಾ ಸಮಯದಲ್ಲಿ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ಅಂಕಪಟ್ಟಿಗಳನ್ನು ಒದಗಿಸಲು ಸೂಚಿಸಿದ್ದಲ್ಲಿ ವಿದ್ಯಾರ್ಥಿಗಳು ಹಾಜರುಪಡಿಸತಕ್ಕದ್ದು, ಒಂದು ವೇಳೆ ಒದಗಿಸದೇ ಇರುವಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶಿವಮಾನಪ್ಪ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande