ಧರ್ಮಸ್ಥಳ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ತನಿಖೆ ಆರಂಭ
ಮಂಗಳೂರು, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ತನಿಖೆಗೆ ಈಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮುಂದಾಗಿದೆ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ತನಿಖೆ ಆರಂಭಿಸಿದೆ. ಈ ಪ್ರಕರಣದಲ್ಲಿ 1995 ರಿಂದ
Nhrc


ಮಂಗಳೂರು, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ತನಿಖೆಗೆ ಈಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮುಂದಾಗಿದೆ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ತನಿಖೆ ಆರಂಭಿಸಿದೆ.

ಈ ಪ್ರಕರಣದಲ್ಲಿ 1995 ರಿಂದ 2014ರವರೆಗೆ 100ಕ್ಕೂ ಹೆಚ್ಚು ಶವಗಳನ್ನು ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳನ್ನು ಬಲವಂತವಾಗಿ ಹೂತಿಡಲಾಗಿದೆ ಎನ್ನುವ ಆರೋಪ ಇದೆ. ಕೆಲ ಶವಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರದ್ದಾಗಿರು ಕುರಿತು ಶಂಕೆ ವ್ಯಕ್ತವಾಗಿದೆ.

ಧರ್ಮಸ್ಥಳದ ಮಾಜಿ ಸ್ವಚ್ಛತಾ ಕಾರ್ಮಿಕ ಜುಲೈ 11, 2025ರಂದು ಮಂಗಳೂರಿನ ನ್ಯಾಯಾಲಯದಲ್ಲಿ ನೂರಾರು ಶವಗಳನ್ನು ತಾನೇ ಹೂತಟ್ಟಿದ್ದಾಗಿ ಹೇಳಿಕೆ ನೀಡಿದ್ದಾನೆ. ಇದರಲ್ಲಿ ಕೆಲವು ಶವಗಳು ದೌರ್ಜನ್ಯಕ್ಕೊಳಗಾದವರದ್ದಾಗಿವೆ ಎಂದು ಆತ ಆರೋಪಿಸಿದ್ದಾನೆ. ಈ ಹೇಳಿಕೆಯ ನಂತರವೇ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.

ಎನ್ಎಚ್ಆರ್ ಸಿ ತಂಡವು ಬೆಳ್ತಂಗಡಿ ಎಸ್ಐಟಿ ಕಚೇರಿ, ಧರ್ಮಸ್ಥಳ ಗ್ರಾಮ ಪಂಚಾಯಿತಿ, ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿ, ದಾಖಲಾಗಿರುವ ಅಸ್ವಾಭಾವಿಕ ಸಾವಿನ ಪ್ರಕರಣಗಳ ವಿವರ ಸಂಗ್ರಹಿಸಿದೆ. ಆರೋಪಿತ ಸ್ಥಳಗಳಾದ ನೇತ್ರಾವತಿ ನದಿಯ ಸ್ನಾನಘಾಟ್, ಬಾಹುಬಲಿ ಬೆಟ್ಟದ ರಸ್ತೆ ಮತ್ತು ಕಾಡು ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದೆ.

ಜುಲೈ 31ರಂದು ಎಸ್ಐಟಿ ಆರನೇ ಸ್ಥಳದಿಂದ ಭಾಗಶಃ ಅಸ್ಥಿಪಂಜರವನ್ನು ಪತ್ತೆಹಚ್ಚಿತ್ತು. ಇದು ಸುಮಾರು 4 ಅಡಿ ಆಳದಲ್ಲಿ ಪತ್ತೆಯಾಗಿದ್ದು, ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ದೂರುದಾರ ಒಟ್ಟು 15 ಶಂಕಿತ ಸ್ಥಳಗಳನ್ನು ಗುರುತಿಸಿದ್ದಾನೆ.

ಎನ್ಎಚ್ಆರ್ ಸಿ ತನಿಖೆ ಸಂಪೂರ್ಣ ‘ಸ್ವಯಂ ಪ್ರೇರಿತವಾಗಿ ಆರಂಭವಾಗಿದ್ದು, ಗ್ರಾಮ ಪಂಚಾಯಿತಿ ಹಾಗೂ ಪೊಲೀಸರು ಗುರುತಿಸಲಾಗದ ಶವಗಳನ್ನು ಕಾನೂನು ಪ್ರಕ್ರಿಯೆ ಅನುಸರಿಸಿ ವಿಲೇವಾರಿ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಶವ ವಿಲೇವಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಹೇಳಿಕೆಗಳನ್ನು ದಾಖಲಿಸಲಾಗಿದೆ.

ಈ ಪ್ರಕರಣವು ತೀವ್ರ ಚರ್ಚೆಗೆ ಕಾರಣವಾಗಿದ್ದು, ತನಿಖೆಯ ಅಂತಿಮ ವರದಿ ಧರ್ಮಸ್ಥಳದಲ್ಲಿ ನಡೆದಿರಬಹುದಾದ ಗಂಭೀರ ಮಾನವ ಹಕ್ಕು ಉಲ್ಲಂಘನೆಗಳ ಸತ್ಯಾಂಶವನ್ನು ಬಹಿರಂಗಪಡಿಸುವ ನಿರೀಕ್ಷೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande