ವಿಧಾನ ಸಭೆ ಕಲಾಪದಲ್ಲಿ ಧರ್ಮಸ್ಥಳ ಪ್ರಕರಣ ಪ್ರತಿಧ್ವನಿ
ಬೆಂಗಳೂರು, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಧಾನ ಸಭೆ ಕಲಾಪದಲ್ಲಿ ಧರ್ಮಸ್ಥಳ ಶವ ಹೂತಿರುವ ಪ್ರಕರಣ ಪ್ರತಿಧ್ವನಿಸಿ ಗದ್ದಲಕ್ಕೆ ಕಾರಣವಾಯಿತು. ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ತನಿಖೆಗೆ ನಮ್ಮ ಆಕ್ಷೇಪವಿಲ
Session


ಬೆಂಗಳೂರು, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಧಾನ ಸಭೆ ಕಲಾಪದಲ್ಲಿ ಧರ್ಮಸ್ಥಳ ಶವ ಹೂತಿರುವ ಪ್ರಕರಣ ಪ್ರತಿಧ್ವನಿಸಿ ಗದ್ದಲಕ್ಕೆ ಕಾರಣವಾಯಿತು.

ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು.

ತನಿಖೆಗೆ ನಮ್ಮ ಆಕ್ಷೇಪವಿಲ್ಲ, ಆದರೆ ಹಿಂದೂ ಧಾರ್ಮಿಕ ಕೇಂದ್ರವನ್ನು ಗುರಿಯಾಗಿಸಲಾಗಿದೆ ಎಂದು ಆರೋಪಿಸಿದ ಅವರು, ಅನಾಮಿಕ, ಐದು ಗುಂಡಿ, ಹತ್ತು ಗುಂಡಿ ಎಂದು ಹೇಳುತ್ತ ಈಗ 13 ಗುಂಡಿ ಆಗಿದೆ. ಊಹಾಪೋಹಗಳಿಗೆ ತೆರೆ ಎಳೆಯಬೇಕು. ಧಾರ್ಮಿಕ ನಂಬಿಕೆಗಳ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ಮೇಲೆ ಕ್ರಮ ಕೈಗೊಳ್ಳಬೇಕು. ತನಿಖೆ ಸಂಪೂರ್ಣ ವರದಿ ಕುರಿತು ಗೃಹ ಸಚಿವರು ಉತ್ತರ ನೀಡುವಂತೆ ಆಗ್ರಹಿಸಿದರು.

ಶಾಸಕರ ಪ್ರಶ್ನೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಉತ್ತರಿಸಿ ತನಿಖೆ ಪ್ರಗತಿಯಲ್ಲಿದೆ, ಮಧ್ಯ ಪ್ರವೇಶ ಮಾಡುವುದಿಲ್ಲ. ತನಿಖೆ ಪೂರ್ಣಗೊಂಡ ನಂತರ ವರದಿ ಸಲ್ಲಿಸಲಾಗುವುದು. ನಂತರ ಸಂಪೂರ್ಣ ಉತ್ತರ ನೀಡುತ್ತೇನೆ ಎಂದರು.

ಈ ಉತ್ತರಕ್ಕೆ ಅಸಮಾಧಾನಗೊಂಡ ಬಿಜೆಪಿ ಸದಸ್ಯರು ಒಗ್ಗಟ್ಟಾಗಿ ವಿರೋಧ ವ್ಯಕ್ತಪಡಿಸಿ, ಸ್ಪಷ್ಟನೆ ನೀಡಬೇಕು, ಸುಳ್ಳುಪ್ರಚಾರ ನಿಲ್ಲಿಸಿ, ಪ್ರಕರಣದ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು.

ಈ ವೇಳೆ ಮಧ್ಯ ಪ್ರವೇಶ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರು, ನಾವು ಯಾರ ಪರವೂ ಇಲ್ಲ, ಸತ್ಯದ ಪರ ಇದ್ದು ತನಿಖೆ ಮುಗಿಯುವವರೆಗೆ ಕಾಯುವಂತೆ ಮನವಿ ಮಾಡಿದರು.

ಇದಕ್ಕೆ ಒಪ್ಪದ ಪ್ರತಿಪಕ್ಷ ನಾಯಕ ಆರ್.ಅಶೋಕ ಮಧ್ಯಂತರ ವರದಿ ಪಡೆದು ಸ್ಪಷ್ಟನೆ ನೀಡಿ ಎಂದು ಒತ್ತಾಯಿಸಿದರು.

ಅಶೋಕ ಆಗ್ರಹಕ್ಕೆ ಗೃಹ ಸಚಿವರು ಪ್ರತಿಕ್ರಿಯಿಸಿ ಎಸ್‌ಐಟಿ ತನಿಖೆ ಮುಗಿಯುವವರೆಗೂ ಮಧ್ಯ ಪ್ರವೇಶ ಮಾಡುವುದಿಲ್ಲ. ವರದಿ ಬಂದ ನಂತರ ಉತ್ತರ ನೀಡುವುದಾಗಿ ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande