ವಿಜಯಪುರ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಸವಜಯಮೃತ್ಯುಂಜಯ ಶ್ರೀಗಳ ಆರೋಗ್ಯವನ್ನು ಗಣ್ಯರು ಬಾಗಲಕೋಟೆಯಲ್ಲಿ ವಿಚಾರಿಸಿದರು. ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಜಿಯ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಭಾರತೀಯ ಜನತಾ ಪಕ್ಷದ ಬೆಂಬಲಿಗರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರನ್ನು ಸತ್ಕರಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande