ನವದೆಹಲಿ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು ಮತ ಕಳ್ಳತನ ಪ್ರಕರಣದ ಕುರಿತು ಕಾಂಗ್ರೆಸ್ ಹಿರಿಯ ಸಂಸದ, ರಾಜ್ಯ ಸಭೆಯ ಪ್ರತಿ ಪಕ್ಷದ ಉಪನಾಯಕ ಪ್ರಮೋದ್ ತಿವಾರಿ ಸರ್ಕಾರ ಹಾಗೂ ಚುನಾವಣಾ ಆಯೋಗದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ, ಸ್ವತಂತ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. “ಇದು ರಾಜಕೀಯ ವಿಚಾರವಲ್ಲ; ಸಂವಿಧಾನ ನೀಡಿರುವ ಅತಿಮಹತ್ವದ ಮತದಾನದ ಹಕ್ಕು ರಕ್ಷಣೆಯ ಪ್ರಶ್ನೆ” ಎಂದು ತಿವಾರಿ ಹೇಳಿದರು.
ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ 300 ಕ್ಕೂ ಹೆಚ್ಚು ಸಂಸದರು ಮತದಾನದ ಹಕ್ಕು ಕಸಿದುಕೊಳ್ಳದಂತೆ ಮನವಿ ಮಾಡಲು ಬೀದಿಗಿಳಿದಿದ್ದಾರೆ ಆದರೆ, ಸರ್ಕಾರ ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆದು, ಅನೇಕ ಸಂಸದರನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಆರೋಪಿಸಿದರು.
ಸಾರ್ವಜನಿಕ ಪ್ರತಿನಿಧಿಗಳ ಧ್ವನಿ ಮುಚ್ಚುವ ಪ್ರಯತ್ನ ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆ ಎಂದು ತಿವಾರಿ ಎಚ್ಚರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa