ಜವಾಹರ ನವೋದಯ ವಿದ್ಯಾಲಯ; ಪ್ರಥಮ ಪಿಯುಸಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ (11 ತರಗತಿ) ವಿಜ್ಞಾನ ವಿಭಾಗ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ವಿದ್
ಜವಾಹರ ನವೋದಯ ವಿದ್ಯಾಲಯ; ಪ್ರಥಮ ಪಿಯುಸಿ ಪ್ರವೇಶಾತಿಗೆ ಅರ್ಜಿ ಆಹ್ವಾನ


ಬಳ್ಳಾರಿ, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ (11 ತರಗತಿ) ವಿಜ್ಞಾನ ವಿಭಾಗ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ವಿದ್ಯಾರ್ಥಿಗಳು ಅರ್ಹರಾಗಿದ್ದು, 01.06.2008 ರಿಂದ 31.07.2010 ರ ನಡುವೆ ಜನಿಸಿದವರಾಗಿರಬೇಕು. ಶೇ.60 ರಷ್ಟು ಫಲಿತಾಂಶ (ಗಣಿತ-ಶೇ.60, ವಿಜ್ಞಾನ-ಶೇ.60) ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ದೂ.08391-223490 ಗೆ ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಸುದೇಶ ಗೋಪಾಲ ಮಲಾಜುರೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande