ಗದಗ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯ ಜವಹಾರ ನವೋದಯ ಹನ್ನೊಂದನೆ ತರಗತಿಯ ವಿಜ್ಞಾನ ವಿಭಾಗದಲ್ಲಿ ಎರಡನೇ ವಿಭಾಗ ತೆರೆದಿದ್ದು ಹತ್ತನೇ ತರಗತಿಯ ಅಂಕಗಳ ಆಧಾರದ ಮೇಲೆ ಅರ್ಹಾಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ:20-08-2025 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆಗಳನ್ನು ಮೂಲಕ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾಲಯದ ಕಚೇರಿ ದೂರವಾಣಿ ಸಂಖ್ಯೆ 08371-200401, ಅಥವಾ 9945699049, 9945872052 ಗೆ ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಆಹ್ವಾನ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP