ನವದೆಹಲಿ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಲಹಾಬಾದ್ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ, ಲೋಕ ಸಭೆಯಲ್ಲಿ ಮಹಾಭಿಯೋಗ ನಿರ್ಣಯ ಅಂಗೀಕಾರವಾಗಿದೆ.
ಈ ಕುರಿತು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದ್ದಾರೆ.
ಜುಲೈ 21 ರಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಹಾಗೂ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ 146 ಸಂಸದರು ಈ ಪ್ರಸ್ತಾವನೆ ಸಲ್ಲಿಸಿದ್ದಾಗಿ ಮಾಹಿತಿ ನೀಡಿದರು.
ಪ್ರಸ್ತಾವನೆಯಲ್ಲಿ ನ್ಯಾಯಮೂರ್ತಿ ವರ್ಮಾ ಅವರನ್ನು ಹುದ್ದೆಯಿಂದ ವಜಾಗೊಳಿಸಲು ರಾಷ್ಟ್ರಪತಿಗೆ ಮನವಿ ಮಾಡುವಂತೆ ಸಂವಿಧಾನದ 124(4), 217 ಮತ್ತು 218ನೇ ವಿಧಿಗಳ ಅಡಿಯಲ್ಲಿ ವಿನಂತಿಸಲಾಗಿದೆ.
ನ್ಯಾಯಾಧೀಶರ (ವಿಚಾರಣಾ) ಕಾಯ್ದೆ, 1968ರ ಸೆಕ್ಷನ್ 3(2) ಅಡಿಯಲ್ಲಿ ರಚಿಸಲಾದ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಬಿ.ವಿ. ಆಚಾರ್ಯ ಸದಸ್ಯರಾಗಿ ಇದ್ದಾರೆ.
ಸಮಿತಿಯ ವರದಿ ಬಂದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿರ್ಲಾ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa