ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ : ಡಿಸಿ
ಬಳ್ಳಾರಿ, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಪ್ರತಿ ಮನೆ-ಮನೆ ಮೇಲೂ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರ
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ : ಡಿಸಿ


ಬಳ್ಳಾರಿ, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಪ್ರತಿ ಮನೆ-ಮನೆ ಮೇಲೂ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

ಆ.13 ರಿಂದ ಆ.15 ರವರೆಗೆ ಮೂರನೇ ಹಂತದ ಅಭಿಯಾನ ನಡೆಯಲಿದ್ದು, ಅಧಿಕಾರಿಗಳು ಕಚೇರಿಗಳಲ್ಲಿ, ಸಾರ್ವಜನಿಕರು ಮನೆ ಮೇಲೆ ಧ್ವಜಾರೋಹಣ ನೆರವೇರಿಸುವುದು ಹಾಗೂ ವಾಹನಗಳಲ್ಲಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವುದನ್ನು ವಿಡಿಯೋ ಮತ್ತು ಛಾಯಾಚಿತ್ರಗಳನ್ನು ತೆಗೆದು ಹಾಗೂ ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪೆÇ್ಲೀಡ್ ಮಾಡಬೇಕು ಎಂದರು.

ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ಸೆಲ್ಫಿಗಳನ್ನು www.harghartiranga.com ನಲ್ಲಿ ಹಂಚಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande