ಕೊಪ್ಪಳ: 2006-07ನೇ ಭಾಗ್ಯಲಕ್ಷ್ಮೀ ಯೋಜನೆಯ ಮೆಚ್ಯೂರಿಟಿ ಪ್ರಸ್ತಾವನೆ ಸಲ್ಲಿಸಲು ಸೂಚನೆ
ಕೊಪ್ಪಳ, 12 ಆಗಸ್ಟ್ (ಹಿ.ಸ.) : ಆ್ಯಂಕರ್ : 2006-07ನೇ ಭಾಗ್ಯಲಕ್ಷ್ಮೀ ಯೋಜನೆಯ ಮೆಚ್ಯೂರಿಟಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮೀ ಬಾಂಡ್ ಪಡೆ
ಕೊಪ್ಪಳ: 2006-07ನೇ ಭಾಗ್ಯಲಕ್ಷ್ಮೀ ಯೋಜನೆಯ ಮೆಚ್ಯೂರಿಟಿ ಪ್ರಸ್ತಾವನೆ ಸಲ್ಲಿಸಲು ಸೂಚನೆ


ಕೊಪ್ಪಳ, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : 2006-07ನೇ ಭಾಗ್ಯಲಕ್ಷ್ಮೀ ಯೋಜನೆಯ ಮೆಚ್ಯೂರಿಟಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದ ಫಲಾನುಭವಿಗಳ ಮೆಚೂರಿಟಿ ಅವಧಿ 2024-25ರಲ್ಲಿ 18 ವರ್ಷ ಪೂರ್ಣಗೊಂಡಿದೆ. ಆದರೆ, ವಲಸೆ ಹೋದ ಹಾಗೂ ವಿಳಾಸ ಪತ್ತೆಯಾಗದ ಕೆಲವು ಅರ್ಹ ಫಲಾನುಭವಿಗಳ ಪ್ರಸ್ತಾವನೆಗಳನ್ನು ಇನ್ನೂ ಆನ್‍ಲೈನ್‍ನಲ್ಲಿ ಸಲ್ಲಿಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಅಂತಹ ಫಲಾನುಭವಿಗಳು ಅಕ್ಟೋಬರ್-2025 ಅಂತ್ಯದೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಸೆಕ್ಯೂರ್ ಆಸ್ಪತ್ರೆ ಹಿಂಭಾಗ, ಹೊಸಪೇಟೆ ರಸ್ತೆ, ಕೊಪ್ಪಳ, ಇಲ್ಲಿಗೆ ಭೇಟಿ ನೀಡಿ ಸಂಬಂಧಿತ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಬೇಕು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande