ಹೊಸಪೇಟೆ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಆ್ಯಂಕರ್: ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಗಸ್ಟ್ 13 ರಂದು, ಬೆಳಗ್ಗೆ 10:30 ಕ್ಕೆ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆಯ ಬಗ್ಗೆ ಯೋಜನೆ ಪಾಲುದಾರರಿಗೆ ಜಿಲ್ಲಾಮಟ್ಟದ ಅರಿವು ಮೂಡಿಸುವ ಕಾರ್ಯಗಾರ ಮತ್ತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಿ.ಟಿ.ಮಂಜುನಾಥ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ, ಜಿಲ್ಲಾಡಳಿತ, ಪಂಚಾಯತ್ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು ವಸತಿ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್