ಬೆಂಗಳೂರು, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್, ಪವಿತ್ರಾ ಹಾಗೂ ಇತರರು ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾದರು.
ಈ ವಿಚಾರಣೆ ವೇಳೆ ಎಲ್ಲಾ ಆರೋಪಿಗಳು ಹಾಜರಾಗಿದ್ದರೆ ಚಾರ್ಜ್ ಫ್ರೇಮಿಂಗ್ ಪ್ರಕ್ರಿಯೆ ನಡೆಯಬಹುದಾಗಿತ್ತು.
ಆದರೆ, ಎ10 ವಿನಯ್, ಎ15 ಕಾರ್ತಿಕ್, ಎ16 ಕೇಶವಮೂರ್ತಿ ಹಾಗೂ ಎ17 ನಿಖಿಲ್ ಕೋರ್ಟ್‌ಗೆ ಗೈರಾಗಿದ್ದರಿಂದ ವಿಚಾರಣೆಯನ್ನು ಮುಂದೂಡಲಾಯಿತು.
ಸೆಪ್ಟೆಂಬರ್ 9ರಂದು ಎಲ್ಲ ಆರೋಪಿಗಳು ಹಾಜರಾಗಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa