ಮುಂದುವರೆದ ಭಯೋತ್ಪಾದಕರ ಶೋಧ ಕಾರ್ಯಾಚರಣೆ
ಕುಲ್ಗಾಮ್, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ 12ನೇ ದಿನವೂ ಮುಂದುವರಿದಿದೆ. ಗುಹೆಗಳು ಮತ್ತು ದಟ್ಟ ಕಾಡುಗಳಲ್ಲಿ ಅಡಗಿರುವ ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿ
Search


ಕುಲ್ಗಾಮ್, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ 12ನೇ ದಿನವೂ ಮುಂದುವರಿದಿದೆ. ಗುಹೆಗಳು ಮತ್ತು ದಟ್ಟ ಕಾಡುಗಳಲ್ಲಿ ಅಡಗಿರುವ ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿದ್ದು, ಡ್ರೋನ್ ಹಾಗೂ ಹೆಲಿಕಾಪ್ಟರ್‌ಗಳ ಸಹಾಯದಿಂದ ನಿಗಾ ವಹಿಸಲಾಗುತ್ತಿದೆ.

ಆಗಸ್ಟ್ 1ರಂದು ಆರಂಭವಾದ ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಜವಾನರು ಹುತಾತ್ಮರಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಇಬ್ಬರು ಉಗ್ರರು ಹತರಾಗಿದ್ದು, ಅವರ ಗುರುತು ಇನ್ನೂ ಬಹಿರಂಗವಾಗಿಲ್ಲ. ಇತ್ತೀಚಿನ ವರ್ಷಗಳಲ್ಲಿ ಕಣಿವೆಯಲ್ಲಿ ನಡೆದ ಅತಿ ಉದ್ದದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಇದಾಗಿದ್ದು, ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ನಳಿನ್ ಪ್ರಭಾತ್ ಹಾಗೂ ಸೇನಾ ಉತ್ತರ ಕಮಾಂಡರ್ ಲೆ.ಜ. ಪ್ರತೀಕ್ ಶರ್ಮಾ ಕಾರ್ಯಾಚರಣೆಯನ್ನು ನೇರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande