ವಿಜಯಪುರ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೌಂಡ್ ಸಿಸ್ಟಮ್ ಆಪರೇಟರ್ ಮತ್ತು ಮಾಲೀಕರ ಸಭೆ ನಡೆಯಿತು. ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಹಾಗೂ ಸಿಬ್ಬಂದಿ ಜೊತೆಗೆ ಠಾಣೆಯಲ್ಲಿ ಮುಂಬರುವ ಗಣೇಶ ಹಬ್ಬ ಮತ್ತು ಈದ್ ಮಿಲಾದ ಹಬ್ಬದ ಪ್ರಯುಕ್ತ ವಿಜಯಪುರದ ಎಲ್ಲಾ ಸೌಂಡ್ ಸಿಸ್ಟಮ್ ಆಪರೇಟರ್ ಮತ್ತು ಮಾಲೀಕರೊಂದಿಗೆ ಸಭೆ ಜರುಗಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಅಲ್ಲದೇ, ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ ಪ್ರತಿಯೊಬ್ಬರೂ ಪೊಲೀಸರಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande