ಬೆಂಗಳೂರು, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮಾಜಿ ಸಚಿವ ಕೆ.ಎನ್. ರಾಜಣ್ಣರನ್ನು ಸಂಪುಟದಿಂದ ವಜಾಗೊಳಿಸಿರುವ ನಿಖರ ಕಾರಣ ತಿಳಿದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ರಾಜಣ್ಣ ಅವರಂತೆಯೇ ತಾವು ಕೂಡ ತುಮಕೂರು ಜಿಲ್ಲೆಯವರಾಗಿದ್ದರೂ, ವಜಾ ವಿಚಾರದಲ್ಲಿ ಯಾವುದೇ ಮಾಹಿತಿ ತಮ್ಮ ಬಳಿ ಇಲ್ಲವೆಂದು ಅವರು ಸ್ಪಷ್ಟಪಡಿಸಿದರು.
ಇದು ಹೈಕಮಾಂಡ್ ತೀರ್ಮಾನವಾಗಿದ್ದು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ವರಿಷ್ಠರ ನಿರ್ಧಾರವನ್ನು ಗೌರವಿಸುತ್ತಾರೆ ಮತ್ತು ಅದಕ್ಕೆ ಬದ್ಧರಾಗಿರುತ್ತಾರೆ,” ಎಂದು ಪರಮೇಶ್ವರ್ ಹೇಳಿದ್ದಾರೆ.
ವಜಾದ ನಿಜವಾದ ಕಾರಣ ಕೆಪಿಸಿಸಿ ಅಧ್ಯಕ್ಷರಿಗೆ ಅಥವಾ ಮುಖ್ಯಮಂತ್ರಿಗಳಿಗೆ ಮಾತ್ರ ಗೊತ್ತಿರಬಹುದು ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa