ವಾಷಿಂಗ್ಟನ್, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಗರದಲ್ಲಿರುವ ಟಾರ್ಗೆಟ್ ಅಂಗಡಿಯ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯಾಹ್ನ ನಡೆದ ಈ ಘಟನೆಯಲ್ಲಿ ಮತ್ತೋರ್ವ ಗಾಯಗೊಂಡಿದ್ದಾನೆ.
ಆಸ್ಟಿನ್ ಪೊಲೀಸ್ ಇಲಾಖೆ ನೀಡಿರುವ ಮಾಹಿತಿಯಂತೆ, ಮಧ್ಯಾಹ್ನ 2:15ರ ಸುಮಾರಿಗೆ ಗುಂಡಿನ ದಾಳಿಯ ಮಾಹಿತಿ ಬಂದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಅಂಗಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಗುಂಡಿನ ದಾಳಿಯಿಂದ ಅಧಿಕ ರಕ್ತಸ್ರಾವವಾಗಿ ಮಗು ಹಾಗೂ ಒಬ್ಬ ವಯಸ್ಕ ಸ್ಥಳದಲ್ಲೇ ಮೃತಪಟ್ಟಿದ್ದು. ಮತ್ತೊಬ್ಬ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿದ ಶಂಕಿತನ ವಯಸ್ಸು ಸುಮಾರು 32 ವರ್ಷ. ದಾಳಿಯ ನಂತರ ಆತ ಕಾರನ್ನು ಕದ್ದುಕೊಂಡು ಪರಾರಿಯಾಗಿದ್ದಾನೆ. ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಅಪಘಾತಕ್ಕೀಡಾದ ಆತ, ಮತ್ತೊಂದು ಕಾರು ಕಬಳಿಸಲು ಯತ್ನಿಸಿದಾಗ ಪೊಲೀಸರು ಅವನನ್ನು ಬಂಧಿಸಿದ್ದಾರೆ. ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾನೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa