ಬಿಜಾಪುರ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಜಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ನಕ್ಸಲ್ ಎನ್‌ಕೌಂಟರ್‌ನಲ್ಲಿ ಇಬ್ಬರು ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್ಜಿ) ಸೈನಿಕರು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ವಿಮಾನದ ಮೂಲಕ ರಾಯ್‌ಪುರಕ್ಕೆ ಕರೆದೊಯ್ಯಲಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕ್ಸಲ್ ಚಟುವಟಿಕೆಗಳ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಡಿಆರ್ಜಿ ತಂಡವು ಶೋಧ ಕಾರ್ಯಾಚರಣೆಗೆ ತೆರಳಿದ ವೇಳೆ, ಕಾಡಿನಲ್ಲಿ ಹೊಂಚುಹಾಕಿದ್ದ ನಕ್ಸಲರು ಗುಂಡು ಹಾರಿಸಿದರು. ಪೊಲೀಸರು ಕೂಡ ಪ್ರತಿದಾಳಿ ನಡೆಸಿ, ಸುಮಾರು ಒಂದು ಗಂಟೆ ಕಾಲ ಗುಂಡಿನ ಚಕಮಕಿಯು ನಡೆಯಿತು. ನಂತರ ನಕ್ಸಲರು ದಟ್ಟ ಕಾಡು ಮತ್ತು ಬೆಟ್ಟದಲ್ಲಿ ಪರಾರಿಯಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಅನೇಕ ನಕ್ಸಲರು ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ಐಜಿ ಸುಂದರರಾಜ್ ಪಿ ತಿಳಿಸಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕಳುಹಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ. ಕಾರ್ಯಾಚರಣೆ ಮುಗಿದ ನಂತರ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa