ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ
ರಾಯಚೂರು , 13 ಆಗಸ್ಟ್ (ಹಿ.ಸ.) ಆ್ಯಂಕರ್: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸುರಕ್ಷಾ ಸಂಸ್ಥೆ, ರೋಟರಿ
5th anniversary of the Drug Free India Campaign


5th anniversary of the Drug Free India Campaign


ರಾಯಚೂರು , 13 ಆಗಸ್ಟ್ (ಹಿ.ಸ.)

ಆ್ಯಂಕರ್: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸುರಕ್ಷಾ ಸಂಸ್ಥೆ, ರೋಟರಿ ಕ್ಲಬ್ ಕೃಷ್ಣ ತುಂಗೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 13ರ ಬೆಳಗ್ಗೆ ನಗರದ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಶ್ರೀದೇವಿ ಎಸ್ ನಿಡಗುಂದಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು, ರೋಟರಿ ಕ್ಲಬ್ ಕೃಷ್ಣ ತುಂಗೆಯ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಇನ್ನಿತರರು ಇದ್ದರು.

ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿದಿ ಕಾರ್ಯಕ್ರಮಗಳು ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳು, ವಿಶ್ವ ವಿದ್ಯಾಲಯಗಳು, ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆದವು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande