ಹೊಸಪೇಟೆ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯನಗರ ಜಿಲ್ಲೆಯ ಹೊಸಪೇಟೆ ಮತ್ತು ಕಮಲಾಪುರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಎಲ್‍ಕೆಜಿ ತರಗತಿಗೆ ಅತಿಥಿ ಶಿಕ್ಷಕಿ ಹಾಗೂ ಶಿಶುಪಾಲಕಿ ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅತಿಥಿ ಶಿಕ್ಷಕಿ ಹುದ್ದೆಗೆ ಸೂಕ್ತ ವಿದ್ಯಾರ್ಹತೆ ಹಾಗೂ ಶಿಶುಪಾಲಕಿ ಹುದ್ದೆಗೆ ಕನಿಷ್ಠ ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಅನುಭವಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.9353211090, 6366705213 ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಮೌಲಾನಾ ಆಜಾದ್ ಮಾದರಿ ಶಾಲೆಯ ಪ್ರಾಂಶುಪಾಲರಾದ ಮಂಜುನಾಥ ಪಾಟೀಲ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್