ವಿಜಯಪುರ, 13 ಆಗಸ್ಟ್ (ಹಿ.ಸ.)
ಆ್ಯಂಕರ್: ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲಾಗಿದೆ. ವಿಜಯಪುರ ನಗರದ ಶಾಸಕ ಯತ್ನಾಳ ಅವರು ಕೊಪ್ಪಳದಲ್ಲಿ ಮಾತನಾಡಿರುವ ಹೇಳಿಕೆ ಖಂಡಿಸಿ ವಿಜಯಪುರ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮೈನುದ್ದೀನ ಬೀಳಗಿ ದೂರು ನೀಡಿದ್ದಾರೆ.
ಮುಸ್ಲಿಂ ಹುಡುಗಿಯನ್ನು ಪ್ರೀತಿಸಿ ಹಿಂದೂ ಹುಡುಗ ಮದುವೆ ಆದರೆ 5 ಲಕ್ಷ ನಗದು ನೀಡಲಾಗುವುದು ಎಂದು ಯತ್ನಾಳ ಹೇಳಿದ್ದರು. ಇದು ಒಂದು ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಆಗಿದೆ ಎಂದು BNS 2023 (U/S 193, 299, 353(1)c ಮತ್ತು 353(2) ಅಡಿಯಲ್ಲಿ ಬೀಳಗಿ ಕೇಸ್ ದಾಖಲು ಮಾಡಿದ್ದಾರೆ. ಈ ಕುರಿತು ವಿಜಯಪುರ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande