ವಿಜಯಪುರ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ಶ್ರೀಕ್ಷೇತ್ರಧರ್ಮ ಸ್ಥಳದ ಕುರಿತು ಅನಗತ್ಯವಾಗಿ ಸುಳ್ಳು ಸುದ್ದಿಗಳು ಪ್ರಸಾರವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತ ವೃಂದದವರಿಂದ ಬೃಹತ್ ಪ್ರತಿಭಟನೆ ನಡೆಸಿದರು.
ನವನಗರದ ಬಾಬು ಜಗಜೀವನ ರಾವ್ ವೃತ್ತದಿಂದ ಜಿಲ್ಲಾಧಿಕಾರಿ ಕಚರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತ ವೃಂದದವರೇಲ್ಲ ಸೇರಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ರಾಜ್ಯದಲ್ಲಿ ಹಿಂದೂ ದೇವಾಲಯಗಳನ್ನೇ ಗುರಿಯಾಗಿಸಿ ಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಕಾಣದ ಕೈಗಳು ಕೆಲಸ ಮಾಡುತ್ತಿದ್ದು, ಇದನ್ನೆಲ್ಲ ತಡೆಗಟ್ಟಲು ನಾವೆಲ್ಲರೂ ಒಂದಾಗಬೇಕಾಗಿದೆ ಎಂದರು.
ಅಪಪ್ರಚಾರ ಮಾಡುತ್ತಿರುವವ ವಿರುದ್ದ ಸರ್ಕಾರ ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ಆಗ್ರಹಿಸಿದರು.
ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಮುಖಂಡ ರಾಜು ರಾಯ್ಕರ್ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣವರ್, ಮಹೇಶ್
ಶೆಟ್ಟಿ ತಿಮರೋಡಿ, ಸಮೀರ್ ಎಂ.ಡಿ.ಸಂತೋಷ್ ಶೆಟ್ಟಿ, ಜಯಂತ ಟಿ., ಅಜಯ ಅಂಚನ್ ಮತ್ತು ಅವನ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳು ಮಟ್ಟದ ಭಾಷೆಯನ್ನು ಉಪ - ಯೋಗಿಸಿ ವೀಡಿಯೋಗಳ ತುಣುಕು ಗಳನ್ನು ತಯಾ ರಿಸಿ ಅದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಇಂತಹವರ ವಿರುದ್ದ ಕ್ರಮ ಕೈಗೊಂಡು - ತಕ್ಷಣವೇ ಎಸ್‌ಐಟಿ ನಡೆಸುತ್ತಿರುವ ಗುಂಡಿ ತೋಡುವುದು ನಿಲ್ಲಿಸಬೇಕು. ಭಕ್ತರ ಭಾವನೆಗಳ ಜೊತೆಗೆ ಚಲ್ಲಾಟ ಆಡಬೇಡಿ ಇದು ಸಾಂಕೇತಿಕ ಪ್ರತಿಭಟನ ರ ಯಾಗಿದ್ದು ಮುಂದಿನ ದಿನಗಳಲ್ಲಿ ಧರ್ಮಸ್ಥಳಕ್ಕೆ ಜ ತೆರಳಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande