ಬೆಂಗಳೂರು, 13 ಆಗಸ್ಟ್ (ಹಿ.ಸ.):
ಆ್ಯಂಕರ್:
ಬೀದಿ ನಾಯಿಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಿ ಎಂದು ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿತು.
ಬೀದಿ ನಾಯಿಗಳ ಹಾವಳಿ ತಡೆಗೆ ಸರಕಾರ ಕ್ರಮ ಕೈಗೊಳ್ಳುವ ಕುರಿತು ವಿಧಾನಸಭೆಯಲ್ಲಿ ಜೆಡಿಎಸ್, ಬಿಜೆಪಿ ನಾಯಕರು ಪ್ರಸ್ತಾಪಿಸಿದರು.
ಶೂನ್ಯ ವೇಳೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಈ ವಿಚಾರವನ್ನು ಪ್ರಸ್ತಾಪಿಸಿ, ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸರ್ವೋಚ್ಚ ನ್ಯಾಯಾಲಯವು ಮೂರು ನಗರಗಳಿಗೆ ಸೀಮಿತವಾಗಿ ತೀರ್ಪು ನೀಡಿದೆ. ಅದನ್ನು ನಮ್ಮ ರಾಜ್ಯ ಸರ್ಕಾರವೂ ಅಳವಡಿಸಿಕೊಂಡು ಬೆಂಗಳೂರು ಸೇರಿದಂತೆ ಇತರ ಕಡೆಗಳಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa