ಗದಗ, 13 ಆಗಸ್ಟ್ (ಹಿ.ಸ.)
ಆ್ಯಂಕರ್: ರಾಜ್ಯದ ಕಾನೂನು , ನ್ಯಾಯ , ಮಾನವ ಹಕ್ಕುಗಳು , ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಅಗಸ್ಟ 14 ಹಾಗೂ 15 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಅಗಸ್ಟ 14 ರಂದು ರಾತ್ರಿ 8.00 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ರಾತ್ರಿ 9 ಗಂಟೆಗೆ ಗದುಗಿಗೆ ಆಗಮಿಸುವರು ಮತ್ತು ವಾಸ್ತವ್ಯ ಮಾಡುವರು.
ಅಗಸ್ಟ 15 ರಂದು ಬೆಳಿಗ್ಗೆ 7.45 ರಿಂದ 8.00 ಗಂಟೆಗೆ ಗದಗ ಇಂಡಸ್ಟ್ರಿಯಲ್ ಎಸ್ಟೇಟ್‌ದಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 8.30 ಗಂಟೆಯಿಂದ 8.45 ವರೆಗೆ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಬೆಳಿಗ್ಗೆ 10 ಗಂಟೆಗೆ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮದ ಉದ್ಘಾಟನೆ ಮಾಡುವರು. ಬೆಳಿಗ್ಗೆ 10.30 ಗಂಟೆಗೆ ಪತ್ರಿಕಾಗೋಷ್ಟಿ ನಡೆಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಭೂಮರೆಡ್ಡಿ ಸರ್ಕಲ್ ಹತ್ತಿರ ಕನಾಟಕ ದಲಿತ ಸಂಘರ್ಷ ಸಮಿತಿ ಗದಗ ಇವರಿಂದ ಅಟೋ ರಿಕ್ಷಾ ಚಾಲಕರಿಗೆ ಪ್ರಶಸ್ತಿ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11.30 ಗಂಟೆಗೆ ನಗರದ ಶ್ರೀ ವೀರನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡುವರು. ಬೆಳಿಗ್ಗೆ 12 ಗಂಟೆಗೆ ಪಂಡಿತ ಪುಟ್ಟರಾಜ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಕ್ರಮ, ಮಧ್ಯಾಹ್ನ 12.15 ಗಂಟೆಗೆ ನರಸಾಪುರ ಹತ್ತಿರದ ಬೆಟಗೇರಿಯಲ್ಲಿ ಮಂಜುನಾಥ ಬುದ್ಧಿಮಾಂಧ್ಯ ಶಿಕ್ಷಣ ಸಂಸ್ಥೆಗೆ ಭೇಟಿ ನೀಡುವರು.
ಅದೇ ದಿನ ಮಧ್ಯಾಹ್ನ 12.45 ಗಂಟೆಗೆ ನಗರದ ಗಾಂಧಿ ಸರ್ಕಲ್ ಹತ್ತಿರದಲ್ಲಿನ ಅನ್ನಪೂರ್ಣೇಶ್ವರಿ ಪ್ರಸಾದ ಕೇಂದ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಗದಗ ಇಂಡಸ್ಟ್ರಿಯಲ್ ಎಸ್ಟೇಟ್‌ದಲ್ಲಿ ರಕ್ತದಾನ ಶಿಬಿರದಲ್ಲಿ ಭಾಗಿಯಾಗುವರು. ಮಧ್ಯಾಹ್ನ 1.30 ಗಂಟೆಗೆ ಶ್ರೀಸಿದ್ಧರಾಮೇಶ್ವರ ನಗರದ ಡಂಬಳ ನಾಕಾದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4.00 ರಿಂದ ಸಂಜೆ 5.30 ರವರೆಗೆ ಕಾಟನ್ ಸೇಲ್ ಸೋಸೈಟಿ ಆವರಣದಲ್ಲಿ ಸೇವಾ ತಂಡದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5.45 ಕ್ಕೆ ನಗರದ ಕೆ.ಎಚ್.ಪಾಟೀಲ ಸಬಾಭವನದಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ 50 ನೇ ವರ್ಷದ ಸುವರ್ಣ ಮಹೋತ್ಸವದ ಸಂಭ್ರಮದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವರು. ಸಂಜೆ 6.30 ರಿಂದ 8.30 ಗಂಟೆಗೆ ಜವಳಿ ಗಲ್ಲಿಯ ಇಂದಿರಾ ವನ ಉದ್ಘಾಟನೆ ಕಾರ್ಯಕ್ರಮ ಹಾಗೂ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ವಾಸ್ತವ್ಯ ಮಾಡುವರು.
ಅಗಸ್ಟ 16 ರಂದು ಬೆಳಿಗ್ಗೆ 6.30 ಗಂಟೆಗೆ ಗದಗನಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 7.30 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP