ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ದಾಳಿ
ಕಾರವಾರ, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 24 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ವಿಧಾ
Satish


ಕಾರವಾರ, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸುಮಾರು 24 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ವಿಧಾನ ಸಭಾ ಅಧಿವೇಶನ ನಡೆಯುತ್ತಿರುವುದರಿಂದ ಶಾಸಕ ಸತೀಶ್ ಸೈಲ್ ಹಾಗೂ ಕುಟುಂಬಸ್ಥರು ಬೆಂಗಳೂರಿನಲ್ಲಿದ್ದಾರೆ.

ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಹಿಂದೆ ಜೈಲು ಶಿಕ್ಷೆ ಅನುಭವಿಸಿದ್ದ ಶಾಸಕ ಸೈಲ್, ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿಯ ಮೂಲಕ ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ದೋಷಿಯಾಗಿದ್ದರು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ತಂಡ ಸಲ್ಲಿಸಿದ ದೂರು ಆಧಾರವಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಳೆದ ಅಕ್ಟೋಬರ್‌ನಲ್ಲಿ ಸತೀಶ್ ಸೈಲ್‌ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ ₹44 ಕೋಟಿ ದಂಡ ವಿಧಿಸಿತ್ತು.

ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸೈಲ್ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ಪರಿಶೀಲಿಸಿದ ನ್ಯಾಯಾಲಯ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಟ್ಟು, ದಂಡ ಮೊತ್ತದ 25% ಠೇವಣಿ ಇಡುವಂತೆ ಸೂಚನೆ ನೀಡಿ ಜಾಮೀನು ನೀಡಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande