ಉಚಿತ ಮೀನು ಮರಿ ವಿತರಣೆ : ಹೆಸರು ನೋಂದಣಿಗೆ ಅವಕಾಶ
ವಿಜಯಪುರ, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಜಯಪುರ ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಸೌಲಭ್ಯ ಯೋಜನೆಯಡಿ ಬಾವಿ ಹಾಗೂ ಕೃಷಿ ಹೊಂಡ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಜಯಪುರ, ಬಬಲೇಶ್ವರ, ತಿಕೋಟಾ, ಸಿಂದಗಿ, ಚಡ
ಉಚಿತ ಮೀನು ಮರಿ ವಿತರಣೆ : ಹೆಸರು ನೋಂದಣಿಗೆ ಅವಕಾಶ


ವಿಜಯಪುರ, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಜಯಪುರ ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಸೌಲಭ್ಯ ಯೋಜನೆಯಡಿ ಬಾವಿ ಹಾಗೂ ಕೃಷಿ ಹೊಂಡ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಜಯಪುರ, ಬಬಲೇಶ್ವರ, ತಿಕೋಟಾ, ಸಿಂದಗಿ, ಚಡಚಣ, ಇಂಡಿ, ದೇವರಹಿಪ್ಪರಗಿ, ಆಲಮೇಲ ತಾಲೂಕಿನ ರೈತರು ಆಗಸ್ಟ್ 20ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲೆ ಸಂಖ್ಯೆ: 9845927110 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande