ವಿದೇಶದಲ್ಲಿ ವ್ಯಾಸಂಗಕ್ಕೆ ಸರಕಾರದಿಂದ ವಿಶೇಷ ಮಾಹಿತಿ ಮೇಳ
ಬೆಂಗಳೂರು, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ. ಬೆಂಗಳ
Education expo


ಬೆಂಗಳೂರು, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರಿನಲ್ಲಿ ಆಗಸ್ಟ್ 17 ರಂದು ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ - 2025 ಅನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ವಿಶೇಷ ಮೇಳದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂಸ್ಥೆಗಳು ವಿಶ್ವದ ಮಟ್ಟದ 500 ರಲ್ಲಿ ಸ್ಥಾನ ಪಡೆದಿವೆ ಎಂದರು.

ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶವನ್ನು ಒದಗಿಸಲಾಗುವುದು. ಇದೇ ಮೊದಲ ಬಾರಿಗೆ ಈ ರೀತಿಯ ಯೋಜನೆಯನ್ನು ದೇಶದಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದು ಜಾಗತಿಕ ಶಿಕ್ಷಣದ ಹೆಬ್ಬಾಗಿಲು ಎಂದು ಸಚಿವರು ತಿಳಿಸಿದರು.

ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು ಭಾರತದಿಂದ ತೆರಳಿದ ನಂತರ ಅವರಿಗೆ ಎಲ್ಲ ರೀತಿಯ ಬೆಂಬಲ ಒದಗಿಸುವುದು ನಮ್ಮ ಗುರಿಯಾಗಿದೆ. ಈ ಸರ್ಕಾರಿ ಬೆಂಬಲಿತ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಹೆಚ್ಚು ಆಪ್ತವಾಗಿರಲಿದೆ. ಶೈಕ್ಷಣಿಕ ಪ್ರಗತಿ ಮತ್ತು ಕಾನೂನು ನೆರವು ಎಲ್ಲವೂ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಆಸ್ಟ್ರೇಲಿಯಾ, ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ, ಐರ್ಲೆಂಡ್, ನ್ಯೂಜಿಲೆಂಡ್ ಮತ್ತು ಮಧ್ಯಪ್ರಾಚ್ಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಭಾಗವಹಿಸಲಿದ್ದು,

ಮೇಳದಲ್ಲಿ ಭಾಗವಹಿಸಲು http://studyabroad.ksdckarnataka.com ನಲ್ಲಿ ನೋಂದಾಯಿಸಿಕೊಳ್ಳಬಹುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande