ಹರ್ ಘರ್ ತಿರಂಗಾ : ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದ ಅಮಿತ್ ಶಾ
ನವದೆಹಲಿ, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಬುಧವಾರ ತಮ್ಮ ಪತ್ನಿ ಸೋನಲ್ ಶಾ ಅವರೊಂದಿಗೆ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪ್ರಾರಂಭವಾದ ಈ ಅಭಿಯಾನವ
Amit sha


ನವದೆಹಲಿ, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಬುಧವಾರ ತಮ್ಮ ಪತ್ನಿ ಸೋನಲ್ ಶಾ ಅವರೊಂದಿಗೆ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪ್ರಾರಂಭವಾದ ಈ ಅಭಿಯಾನವು ದೇಶದ ಏಕತೆ ಮತ್ತು ದೇಶಭಕ್ತಿಯ ಭಾವನೆಗೆ ಬಲ ನೀಡುವುದರ ಜೊತೆಗೆ 140 ಕೋಟಿ ಭಾರತೀಯರ ಅಭಿವೃದ್ಧಿಯ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಎಂದು ಅಮಿತ್ ಶಾ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಈ ಅಭಿಯಾನವು ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಸಮರ್ಪಣೆಯಿಂದ ಕಂಡ ಕನಸನ್ನು ಸಾಕಾರಗೊಳಿಸುವ ದಿಸೆಯಲ್ಲಿ ಮತ್ತೊಂದು ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande