ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಜ್ಯಾದ್ಯಂತ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಎಲ್ಲ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಇಂದು ಕರಾವಳಿ ಭಾಗ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ. ನಾಳೆಯ
ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ


ಬೆಂಗಳೂರು, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಜ್ಯಾದ್ಯಂತ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಎಲ್ಲ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.

ಇಂದು ಕರಾವಳಿ ಭಾಗ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ. ನಾಳೆಯಿಂದ ಕರಾವಳಿ ಭಾಗ ಸೇರಿದಂತೆ ಎಲ್ಲ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande