ಶ್ರಮಿಕ ವಸತಿ ಶಾಲೆ : ಶಾಸಕರ ಬೇಡಿಕೆ ಪರಿಶೀಲನೆ-ಸಂತೋಷ್‌ ಲಾಡ್‌
ಬೆಂಗಳೂರು, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ತಮ್ಮ ತಮ್ಮ ಕ್ಷೇತ್ರದಲ್ಲೂ ಶಾಲೆಗಳನ್ನು ಆರಂಭಿಸಬೇಕು ಎಂದು ಕೆಲವು ಶಾಸಕರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವ
ಶ್ರಮಿಕ ವಸತಿ ಶಾಲೆ : ಶಾಸಕರ ಬೇಡಿಕೆ ಪರಿಶೀಲನೆ-ಸಂತೋಷ್‌ ಲಾಡ್‌


ಬೆಂಗಳೂರು, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ತಮ್ಮ ತಮ್ಮ ಕ್ಷೇತ್ರದಲ್ಲೂ ಶಾಲೆಗಳನ್ನು ಆರಂಭಿಸಬೇಕು ಎಂದು ಕೆಲವು ಶಾಸಕರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ವಿಧಾನ ಸಭೆಯಲ್ಲಿ ಇಂದು ತಿಳಿಸಿದರು.

ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್‌ ಯು.ಬಿ. ಬಣಕಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ. ಈ ಶಾಲೆಗಳ ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸಹ ಪ್ರಗತಿಯಲ್ಲಿದೆ. ರಾಜ್ಯದ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಪ್ರತಿ ಜಿಲ್ಲೆಗೆ ಒಂದು ವಸತಿ ಶಾಲೆ ನಿರ್ಮಾಣ ಮಾಡಲು ಅವಕಾಶ ಇರುತ್ತದೆ ಎಂದು ವಿವರಿಸಿದರು.

ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಹಂತ ಹಂತವಾಗಿ ರಾಜ್ಯದಾದ್ಯಂತ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು.

ಹಾವೇರಿ ಜಿಲ್ಲೆಯ ಹಿರೇಕೆರೂರು ಗ್ರಾಮದ ಗ್ರಾಮಸ್ಥರು ಸುಮಾರು ಹತ್ತು ಎಕರೆ ಜಮೀನನ್ನು ಶಾಲೆ ನಿರ್ಮಾಣಕ್ಕೆ ನೀಡಲು ಮುಂದಾಗಿದ್ದಾರೆ. ಮುಂದೆ ನಿಟ್ಟೂರು ಗ್ರಾಮದಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಿಸಲು ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಯು.ಬಿ. ಬಣಕಾರ್‌ ಅವರು ಕಲಾಪದ ವೇಳೆ ಮನವಿ ಮಾಡಿದ್ದರು.

ಬಹುತೇಕ ಶಾಸಕರಿಂದ ಶ್ರಮಿಕ ವಸತಿ ಶಾಲೆಗಳ ಆರಂಭಕ್ಕೆ ಹೆಚ್ಚಿನ ಬೇಡಿಕೆಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಸರ್ಕಾರ ಹೆಚ್ಚಿನ ವಸತಿ ಶಾಲೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಲಾಡ್‌ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande