ಕೊಪ್ಪಳ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ವತಿಯಿಂದ 2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ತಾಲೂಕಿನ ರೈತ ಭಾಂದವರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಅರ್ಜಿ ನಮೂನೆ, ಆಧಾರ ಕಾರ್ಡ, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ, ನೋಟ್ರಿಯೊಂದಿಗೆ ರೂ. 20 ಛಾಪ ಕಾಗದ (ಬಾಂಡ್), ಬ್ಯಾಂಕ ಪಾಸ್ ಬುಕ್ ಹಾಗೂ ಆರ್.ಟಿ.ಜಿ.ಎಸ್. ಪತ್ರದೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯ ಸದಪಯೋಗ ಪಡೆದುಕೊಳ್ಳಬೇಕು.
ರೈತರು ಕಡ್ಡಾಯವಾಗಿ ಎಫ್‍ಐಡಿ ಯನ್ನು ಹೊಂದಿರಬೇಕಾಗಿದ್ದು, ರೈತರು ಈಗಾಗಲೇ ಎಫ್‍ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಎಫ್‍ಐಡಿ.ಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್