ವಿಜಯಪುರ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವಿಜಯಪುರ ವತಿಯಿಂದ ಜನಾಗ್ರಹ ಆಂದೋಲನ ಪ್ರತಿಭಟನಾ ರ‌್ಯಾಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನದಿಂದ ಅಂಬೇಡ್ಕರ್ ವೃತ್ತದವರೆಗೂ ನಡೆಯಿತು.
ಪಾದಯಾತ್ರೆಯಲ್ಲಿ ಧರ್ಮಸ್ಥಳ ಉಳಿಸೋಣ ಎನ್ನುವ ಅಭಿಯಾನದ ಮೂಲಕ ಮಹೇಶ್ ತಿಮ್ಮರೋಡಿ, ಗಿರೀಶ್ ಮಟ್ಟೆಣ್ಣವರ ಸೇರಿದಂತೆ ಹಲವರ ವಿರುದ್ಧ ಘೋಷಣೆ ಹಾಕಿದರು.
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರುವ ಷಡ್ಯಂತ್ರ ನಡೆಯುತ್ತಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದರ. ಅದಕ್ಕಾಗಿ ಕೂಡಲೇ ಸರ್ಕಾರ ದುಷ್ಟರನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ರ‌್ಯಾಲಿ ವೇಳೆ ವಿಜಯಪುರ ಪಟ್ಟಣದ ಗಾಂಧಿ ಚೌಕ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande